ಕೋಡಿ ಬ್ಯಾರೀಸ್‌ನಲ್ಲಿ ಯುವ ರೆಡ್‌ಕ್ರಾಸ್ ಘಟಕ ಉದ್ಘಾಟನೆ, ಉಪನ್ಯಾಸ

Update: 2017-07-01 07:55 GMT

ಕುಂದಾಪುರ, ಜು.1: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನೆ ಹಾಗೂ ಉಪನ್ಯಾಸ ಕಾರ್ಯಕ್ರಮ ಶುಕ್ರವಾರ ನಡೆಯಿತು.

‘ಆರೋಗ್ಯಕರ ಜೀವನ ಶೈಲಿ’ ಎಂಬ ವಿಷಯದ ಬಗ್ಗೆ ಬ್ಯಾರೀಸ್ ಕನ್‌ವೆನ್ಶನ್ ಹಾಲ್‌ನಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮೆಡಿಕಲ್ ಪ್ರಾಕ್ಟಿಶನರ್ ಡಾ.ಸೋನಿ ಕುಂದಾಪುರ ಮಾತನಾಡಿದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಮಾಸ್ಟರ್ ಮಹಮ್ಮೂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಅಥಿತಿಗಳಾಗಿ ರೆಡ್‌ಕ್ರಾಸ್ ಸೊಸೈಟಿಯ ಕುಂದಾಪುರ ಘಟಕದ ಅಧ್ಯಕ್ಷ ಎಸ್. ಜಯಕರ ಶೆಟ್ಟಿ, ಯುವ ರೆಡ್‌ಕ್ರಾಸ್ ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಕೋಶಾಧಿಕಾರಿ ಶಿವರಾಮ ಶೆಟ್ಟಿ, ಮತ್ತು ಗಣೇಶ್ ಆಚಾರ್ಯ, ಮುತ್ತಯ್ಯ ಶೆಟ್ಟಿ ಹಾಗೂ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಶಮೀರ್ ಉಪಸ್ಥಿತರಿದ್ದರು.

ಬ್ಯಾರೀಸ್ ಯುವ ರೆಡ್‌ಕ್ರಾಸ್ ಘಟಕದ ನೋಡೆಲ್ ಆಫೀಸರ್ ಹಾಗೂ ವಾಣಿಜ್ಯ ಉಪನ್ಯಾಸಕ ಪ್ರೊ.ಮುಹಮ್ಮದ್ ಮುಸ್ತಫಾ ಸ್ವಾಗತಿಸಿದರು. ವಿದ್ಯಾರ್ಥಿ ಮುಹಮ್ಮದ್ ಆದಿಲ್ ವಂದಿಸಿದರು. ಶಬನಮ್ ಬೇಗಂ ಕಾರ್ಯಕ್ರಮ ನಿರೂಪಿಸಿದರು 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News