ಶವಾಗಾರ ನಿರ್ಮಾಣದ ವಿರುದ್ಧ ಎಸ್‌ಎಫ್‌ಐ ಮನವಿ

Update: 2017-07-01 10:18 GMT

ಮಂಗಳೂರು, ಜು.1 ನಗರದಲ್ಲಿರುವ ಜಿಲ್ಲೆಯ ಏಕೈಕ ಸರಕಾರಿ ಶುಶ್ರೂಷ ಶಾಲೆಯ ಆವರಣದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಶವಗಾರ ನಿರ್ಮಾಣ ಆದೇಶವನ್ನು ಹಿಂಪಡೆಯಲು ಒತ್ತಾಯಿಸಿ ದ.ಕ. ಜಿಲ್ಲಾ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಅಪರ ಜಿಲ್ಲಾಧಿಕಾರಿ ಮುಖಾಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಏಕೈಕ ಸರಕಾರಿ ಶುಶ್ರೂಷ ಶಾಲೆಯಲ್ಲಿ ನೂರಕ್ಕೂ ಅಧಿಕ ಬಡ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಶಾಲಾ ಆವರಣದಲ್ಲೇ ಹಾಸ್ಟೆಲ್ ವ್ಯವಸ್ಥೆ ಇದೆ. ಈ ಶಾಲೆಯು ಅನೇಕ ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ. ವಿದ್ಯಾರ್ಥಿಗಳಿಗೆ ಪೂರಕವಾದ ಯಾವುದೇ ವಾತಾವರಣ ಇರುವುದಿಲ್ಲ. ಈಗಾಗಲೇ ವಿದ್ಯಾರ್ಥಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಪ್ರತಿಭಟನೆ ನಡೆಸಿ ಹಲವು ಭಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಈ ಮಧ್ಯೆ ಈ ವಿದ್ಯಾರ್ಥಿಗಳಿಗೆ ಮಾರಕವಾಗುವಂತಹ ಆದೇಶವನ್ನು ಹೊರಡಿಸಿರುವುದು ಖಂಡನೀಯ. ಕೆಎಂಸಿ ಸಂಸ್ಥೆಯು ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಶವಾಗಾರದಲ್ಲಿರುವ ಸ್ಥಳದಲ್ಲಿ ಸ್ಥಾಪಿಸಲಿದೆ. ಇದನ್ನು ಕೈ ಬಿಡಬೇಕು ಎಂದು ಮನವಿ ಮಾಡಿದೆ.

ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ನಿತಿನ್ ಕುತ್ತಾರ್, ವಿದ್ಯಾರ್ಥಿನಿಯರ ಉಪಸಮಿತಿಯ ನಾಯಕಿ ಮಾಧುರಿ ಬೋಳಾರ, ಜಿಲ್ಲಾ ಉಪಾಧ್ಯಕ್ಷ ಹಂಝ ಕಿನ್ಯಾ, ಮಯೂರಿ ಮತ್ತಿತರರು ನಿಯೋಗದಲ್ಲಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News