ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಶರಣು
Update: 2017-07-01 17:51 IST
ಶಿವಮೊಗ್ಗ, ಜು. 1: ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‍ಪೇಟೆ ಸಮೀಪದ ಬೆನವಳ್ಳಿ ಗ್ರಾಮದಲ್ಲಿ ವರದಿಯಾಗಿದೆ.
ದಾನೇಶ್ (48) ಆತ್ಮಹತ್ಯೆಗೆ ಶರಣಾದವರೆಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಯಾರು ಇಲ್ಲದ ವೇಳೆ ಕಳೆನಾಶಕ ಸೇವಿಸಿದ್ದರು. ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.
ದಾನೇಶ್‍ರವರು ಕೃಷಿಗಾಗಿ ಸಾಲ ಮಾಡಿದ್ದು, ಸಾಲ ತೀರಿಸಲಾಗಿದೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬದವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ರಿಪ್ಪನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.