ವೈದ್ಯರ ಮೇಲೆ ಹಲ್ಲೆ: ವಿಷಾದ

Update: 2017-07-01 12:52 GMT

ಪಡುಬಿದ್ರಿ, ಜು.1: ಇತ್ತೀಚಿನ ದಿನಗಳಲ್ಲಿ ವೈದ್ಯರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ ಎಂದು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಬಿ.ಬಿ.ರಾವ್ ವಿಷಾದಿಸಿದರು.

ವಿಶ್ವ ವೈದ್ಯರ ದಿನಾಚರಣೆ ಪ್ರಯುಕ್ತ ನಡೆದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವೈದ್ಯರು ಔಷಧಿಗಳನ್ನು ಕೊಟ್ಟು ರೋಗಿಗಳ ಸೇವೆ ಮಾಡಬಹುದು. ಆದರೆ ಅದನ್ನೇ ನೆಪವಾಗಿಟ್ಟು ಕೊಂಡು ವೈದ್ಯರ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಳಿ ನಡೆಸುವ ಘಟನೆಗಳು ನಡೆಯುತ್ತಿರುವುದು ಖಂಡನೀಯ. ಕೆಲವೊಂದು ವೈದ್ಯರು ಹಣಗಳಿಸುವುದೇ ಅವರನ್ನು ಉದ್ಯಮವನ್ನಾಗಿ ಮಾಡಿದ್ದಾರೆ. ಆದರೆ ಜನರ ಸೇವೆಗೆ ಪ್ರಾಮುಖ್ಯತೆ ಕೊಡಬೇಕಾಗಿದೆ. ಈ ಮೂಲಕ ಮಾನವೀಯತೆಯನ್ನು ಮೆರೆಯಬೇಕು ಎಂದು ಅವರು ಸಲಹೆ ಮಾಡಿದರು.

ಸನ್ಮಾನ: ಇದೇ ಸಂದರ್ಭದಲ್ಲಿ ರೋಟರಿ ಕ್ಲಬ್ ವತಿಯಿಂದ ಸಾರ್ವಜನಿಕ ಆಸ್ಪತ್ರೆ, ಆರೋಗ್ಯ ಸೌಲಭ್ಯಗಳ ಸ್ವಚ್ಚತೆ, ಶುಚಿತ್ವ ಹಾಗೂ ನೈರ್ಮಲ್ಯಕ್ಕಾಗಿ ಕರ್ನಾಟಕ ಸರ್ಕಾರ ಕುಟುಂಬ ಕಲ್ಯಾಣ ಇಲಾಖೆ ನೀಡುವ ಕಾಯಕಲ್ಪ ಪ್ರಶಸ್ತಿ ಹಾಗೂ ಉತ್ತಮ ವೈದ್ಯಕೀಯ ಸೇವೆಗಾಗಿ ನೀಡುವ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಪಡೆದ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಬಿ.ಬಿ.ರಾವ್ ಅವರನ್ನು ಸನ್ಮಾನಿಸಲಾಯಿತು.

ರೋಟರಿ ಕ್ಲಬ್ ಅಧ್ಯಕ್ಷ ಅಬ್ದುಲ್ ಹಮೀದ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸಂದೀಪ್ ಪಲಿಮಾರ್, ಲಕ್ಷ್ಮಣ್ ಪೂಜಾರಿ, ಇಸ್ಮಾಯೀಲ್ ಫಲಿಮಾರ್, ವೆಂಕಟೇಶ್ ಎಂ.ಟಿ, ಅಬ್ದುಲ್‌ರಹ್ಮಾನ್ ಅದ್ದು ಉಪಸ್ಥಿತರಿದ್ದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News