×
Ad

ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ತ್ರಿ-ಸದಸ್ಯ ಸಮಿತಿ ರಚನೆ

Update: 2017-07-01 18:48 IST

ಬೆಂಗಳೂರು, ಜು. 1: ಚುನಾವಣೆಯ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯ ವೇಳೆ ಬರುವ ಪ್ರಸ್ತಾವನೆಗಳನ್ನು ಕೇಂದ್ರ ಚುನಾವಣೆ ಆಯೋಗಕ್ಕೆ ಕಳುಹಿಸುವ ಮುನ್ನ ಪರಿಶೀಲಿಸಲು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ತ್ರಿ-ಸದಸ್ಯ ಸಮಿತಿಯನ್ನು ರಚಿಸಿ ಸರಕಾರವು ಆದೇಶ ಹೊರಡಿಸಿದೆ.

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಈ ಸಮಿತಿ ರಚಿಸಲಾಗಿದ್ದು, ಪ್ರಸ್ತಾವನೆ ಸಲ್ಲಿಸಿದ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಆಡಳಿತ ಸುಧಾರಣೆ ತರಬೇತಿ ಮತ್ತು ರಾಜಕೀಯ ಪಿಂಚಣಿ)ಅಪರ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ ಈ ಸಮಿತಿ ಸದಸ್ಯರಾಗಿರುತ್ತಾರೆ.
 
ಈ ಸಮಿತಿಯು ಚುನಾವಣೆ ಸಂದರ್ಭದಲ್ಲಿ ಬರುವ ಪ್ರಸ್ತಾವನೆಗಳ ಅಗತ್ಯತೆಯನ್ನು ಪರಿಶೀಲಿಸಿ ತನ್ನ ಟಿಪ್ಪಣಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಾದ ಪ್ರಧಾನ ಕಾರ್ಯದರ್ಶಿಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಚುನಾವಣೆ) ಇವರ ಮೂಲಕ ಭಾರತ ಚುನಾವಣಾ ಆಯೋಗಕ್ಕೆ ಕಳುಹಿಸಬೇಕು. ಸಮಿತಿಯು ಪರಿಶೀಲಿಸಿದ ಪ್ರಸ್ತಾವನೆಯ ಸಂಪೂರ್ಣ ವಿವರಗಳು ಹಾಗೂ ಆ ಯೋಜನೆಯ ಜಾರಿಯ ತುರ್ತು ಅಗತ್ಯತೆ ಅಂದರೆ ಚುನಾವಣಾ ಪ್ರಕ್ರಿಯೆ ಪೂರ್ಣ ಗೊಳ್ಳುವವರೆಗೆ ಈ ಪ್ರಸ್ತಾವನೆಯನ್ನು ತಡೆಹಿಡಿಯಲು ಏಕೆ ಸಾಧ್ಯವಿಲ್ಲ ಎಂಬ ಬಗ್ಗೆ ಟಿಪ್ಪಣಿಯೊಂದಿಗೆ ಸಂಬಂಧಿಸಿದ ಮುಖ್ಯ ಚುನಾವಣಾಧಿಕಾರಿಗಳಿಗೆ ಕಳುಹಿಸುವುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News