ಸರಕಾರಿ ಕಾಮಗಾರಿಗಳಲ್ಲಿ ಪರಿಶಿಷ್ಟರಿಗೆ ಮೀಸಲಾತಿ: ಸರಕಾರಿ ಅಧಿಸೂಚನೆ ಪ್ರಕಟ

Update: 2017-07-01 13:29 GMT

ಬೆಂಗಳೂರು, ಜು. 1: ಸರಕಾರಿ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಶೇ.24.1ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ರಾಜ್ಯ ಸರಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ.

ವಿವಿಧ ಇಲಾಖೆಗಳ 50 ಲಕ್ಷ ರೂ. ಮೊತ್ತದ ವರೆಗಿನ ಕಾಮಗಾರಿಗಳನ್ನು ಪರಿಶಿಷ್ಟ ಜಾತಿಯ ಗುತ್ತಿಗೆದಾರರಿಗೆ ಶೇ.17.15 ಹಾಗೂ ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಶೇ.6.95ರಷ್ಟು ಕಾಮಗಾರಿಗಳನ್ನು ಟೆಂಡರ್‌ನಲ್ಲಿ ನೀಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಕರ್ನಾಟಕ ಪಾರದರ್ಶಕ ಕಾಯ್ದೆ-1999ಕ್ಕೆ ತಿದ್ದುಪಡಿ ತಂದಿದ್ದು, ಹೊಸ ಕಾಯ್ದೆ ಅನ್ವಯ ಪರಿಶಿಷ್ಟರಿಗೆ ಸರಕಾರಿ ಕಾಮಗಾರಿಗಳಲ್ಲಿ ಮೀಸಲಾತಿ ಕಲ್ಪಿಸಬೇಕು. ಟೆಂಡರ್ ಆಹ್ವಾನಿಸಿದ ವೇಳೆ ಎರಡು ಬಾರಿ ಎಸ್ಸಿ-ಎಸ್ಟಿ ವರ್ಗದವರು ಟೆಂಡರ್ ಸ್ವೀಕರಿಸದ್ದರೆ, ಅಂತಹ ಕಾಮಗಾರಿಗಳ ಟೆಂಡರ್ ಅನ್ನು ಇತರರಿಗೆ ನೀಡಬಹುದು ಎಂದು ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News