×
Ad

ವಿಕಲಚೇತನರ ಕುಂದುಕೊರತೆಗಳ ಅಹವಾಲು ಸಭೆ

Update: 2017-07-01 19:23 IST

ಮಂಗಳೂರು, ಜು.1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ವಿಕಲಚೇತನರ ಕುಂದುಕೊರತೆಗಳ ಅಹವಾಲು ಸಭೆಯು ಪ್ರತಿ ತಿಂಗಳ 3ನೆ ಸೊಮವಾರ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ನಡೆಯಲಿದೆ.

ವಿಕಲಚೇತನರು ತಮ್ಮ ಅಹವಾಲುಗಳು ಇದ್ದಲ್ಲಿ ಪ್ರತೀ ತಿಂಗಳ 7ನೆ ತಾರೀಕಿನೊಳಗೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್, ಮಂಗಳೂರು ಅಥವಾ ನೋಡಲ್ ಅಧಿಕಾರಿಗಳು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ 0824-2458173, 2422300 ಸಂಪರ್ಕಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ, ದ.ಕ ಮಂಗಳೂರು ಇವರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News