ದೇವಸ್ಥಾನದ ಹುಂಡಿ ಒಡೆದು ಕಳವು
Update: 2017-07-01 20:57 IST
ಮಂಡ್ಯ, ಜು.1: ಪಾಂಡವಪುರ ತಾಲೂಕಿನ ಕೆರೆತೊಣ್ಣೂರು-ಲಕ್ಷ್ಮೀಸಾಗರ ಸಮೀಪವಿರುವ ಶ್ರೀನಿಕುಂಭಿಣಿ(ಕುಂಬಳದೇವಿ) ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು ಹುಂಡಿ ಒಡೆದು ಲಕ್ಷಾಂತರ ರೂ. ಹಾಗೂ ಆಭರಣ ಕಳವು ಮಾಡಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ದೇವಸ್ಥಾನದ ಒಳಗಿದ್ದ ಎರಡು ಹುಂಡಿಯನ್ನು ಒಡೆದು ಅದರಲಿದ್ದ ಹಣ ಹಾಗೂ ಚಿನ್ನಾಭರಣವನ್ನು ದುಷ್ಕರ್ಮಿಗಳು ದೋಚಿಕೊಂಡು ಪರಾರಿಯಾಗಿದ್ದು, ಶನಿವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.
ಸುದ್ದಿ ತಿಳಿದ ಪಟ್ಟಣದ ಪೊಲೀಸರು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕಾಗಿಮಿಸಿ ಪರಿಶೀಲನೆ ನಡೆಸಿ ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಪಾಂಡವಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.