ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Update: 2017-07-02 12:21 GMT

ಮಂಗಳೂರು, ಜು.2: 2017-18ನೆ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮಂಜೂರಾತಿಗಾಗಿ 1ನೆ ತರಗತಿಗೆ ಪ್ರವೇಶ ಪಡೆದ ಹಾಗೂ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ನೋಂದಣಿ ಮಾಡದಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಬೇರೆ ಶಾಲೆಯಿಂದ ವರ್ಗಾವಣೆಗೊಂಡು ದಾಖಲಾಗಿರುವ ವಿದ್ಯಾರ್ಥಿಗಳ ವಿವರವನ್ನು ನಿಗದಿತ ನಮೂನೆಯನ್ನು ಭರ್ತಿ ಮಾಡಿ ಮುಖ್ಯೋಪಾಧ್ಯಾಯರು/ಪ್ರಾಂಶುಪಾಲರು ಸಹಾಯಕ ನಿರ್ದೆಶಕರು(ಗ್ರೇಡ್-2), ಸಹಾಯಕ ನಿರ್ದೇಶಕರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬಿ.ಸಿ.ರಸ್ತೆ, ಬಂಟ್ವಾಳ ತಾಲೂಕು ಕಚೇರಿಗೆ ನೀಡಬೇಕಾಗಿ ತಿಳಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜು.31 ಆಗಿದೆ. ಅರ್ಜಿ ಸಲ್ಲಿಸುವಾಗ ತೊಂದರೆಯಾದಲ್ಲಿ ಇಲಾಖೆಯ ಟೋಲ್‌ಫ್ರೀ ದೂರವಾಣಿ ಸಂಖ್ಯೆ:180042521111ಗೆ ಕರೆಮಾಡಿ ಅಥವಾ ಸಹಾಯಕ ನಿರ್ದೆಶಕರು(ಗ್ರೇಡ್-2), ಸಹಾಯಕ ನಿರ್ದೇಶಕರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬಿ.ಸಿ.ರಸ್ತೆ, ಬಂಟ್ವಾಳ ತಾಲೂಕು (ದೂರವಾಣಿ ಸಂಖ್ಯೆ: 08255-230968)ಇವರನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News