ಶಿಷ್ಯವೇತನ ಮಂಜೂರು

Update: 2017-07-02 14:33 GMT

ಮಂಗಳೂರು, ಜು.2: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2017-18ನೆ ಶೈಕ್ಷಣಿಕ ಸಾಲಿಗಾಗಿ ಒಂದನೆ ತರಗತಿಯಿಂದ ಪಿಯುಸಿ ಎರಡನೆ ವರ್ಷದವರೆಗೆ ಹಾಗೂ ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೊಮಾ, ಜೆ.ಓ.ಸಿ/ ಪ್ರೊಫೆಷನ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಶಿಷ್ಯವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಿದೆ.

ಅರ್ಜಿಯನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರಿಂದ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಡಿ.31 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News