×
Ad

ಡಾ.ಹೆಚ್.ಎಸ್.ವಾಸುದೇವ್

Update: 2017-07-02 20:20 IST

ಮಡಿಕೇರಿ, ಜು.2 : ಕರ್ಣಂಗೇರಿಯ ಶ್ರೀರಾಜರಾಜೇಶ್ವರಿ ದೇವಾಲಯದ ಟ್ರಸ್ಟಿ, ನಗರದ ಶ್ರೀರಾಜರಾಜೇಶ್ವರಿ ವಿದ್ಯಾ ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಹಾಗೂ ನಿವೃತ್ತ ಉಪನ್ಯಾಸಕರಾದ ಡಾ.ಹೆಚ್.ಎಸ್.ವಾಸುದೇವ್(64) ಅವರು ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ, ಮಗ ಹಾಗೂ ಮಗಳನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಜು.3 ರಂದು ಮಧ್ಯಾಹ್ನ ಕರ್ಣಂಗೇರಿಯಲ್ಲಿ ನಡೆಯಲಿದೆ ಎಂದು ಕುಟುಂಬ ವರ್ಗ ತಿಳಿಸಿದೆ.

ಸಂತಾಪ

ವಾಸುದೇವ್ ಅವರ ನಿಧನಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಹೆಚ್.ಎಲ್.ದಿವಾಕರ್ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚುಮ್ಮಿ ದೇವಯ್ಯ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News