‘ನೀಟ್-2017’ ರಾಜ್ಯದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟ
ಬೆಂಗಳೂರು, ಜು.2: ‘ನೀಟ್-2017’ಗೆ ಹಾಜರಾಗಿರುವ ರಾಜ್ಯದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಜು.2ರಂದು ಪ್ರಾಧಿಕಾರವು ಅಭ್ಯರ್ಥಿಗಳ ಮಾಹಿತಿಗಾಗಿ ತನ್ನ ವೆಬ್‌ಸೈಟ್ ನಲ್ಲಿ ಪ್ರಕಟಿಸಿದೆ.
ಈ ಪಟ್ಟಿಯಲ್ಲಿನ ಅಭ್ಯರ್ಥಿಗಳ ಅರ್ಹತೆಯು ಸಿಇಟಿ-2006ರ ಪ್ರವೇಶ ನಿಯಮಗಳಲ್ಲಿನ ಅರ್ಹತಾ ಮಾನದಂಡಗಳಿಗೆ ಪೂರೈಸುವುದರ ಷರತ್ತಿಗೆ ಒಳಪಟ್ಟಿರುತ್ತದೆ. ಮುಂದಿನ ಪ್ರಕ್ರಿಯೆಯು ಮಾಹಿತಿಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನ್ನು ನೋಡಲು ಕೋರಿದೆ.
ಪಿಜಿಸಿಇಟಿ ಮತ್ತು ಡಿಸಿಇಟಿ-2017: ಜು.2ರಂದು ಎಂಬಿಎ ಮತ್ತು ಎಂಸಿಎ ಕೋರ್ಸುಗಳ ಪ್ರವೇಶಕ್ಕೆ ಪಿಜಿಸಿಇಟಿ ಪರೀಕ್ಷೆಯನ್ನು ಮತ್ತು ಲ್ಯಾಟರಲ್ ಎಂಟ್ರಿ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಕ್ಕೆ ಡಿಪ್ಲೋಮಾ ಸಿಇಟಿ ಪರೀಕ್ಷೆಯನ್ನು ನಿಗದಿತ ವೇಳಾಪಟ್ಟಿಯಂತೆ ನಡೆಸಲಾಗಿದೆ.
ಪೂರ್ವಭಾವಿ ಪರೀಕ್ಷೆ-ಜಿಲ್ಲಾ ನ್ಯಾಯಾಧೀಶರ ನೇಮಕಾತಿ: ಹೈಕೋರ್ಟ್‌ದಲ್ಲಿನ ಜಿಲ್ಲಾ ನ್ಯಾಯಾಧೀಶರ ನೇಮಕಾತಿ ಸಂಬಂಧ ಜು.2ರಂದೇ ಏಕಕಾಲದಲ್ಲಿ ಪೂರ್ವಭಾವಿ ಪರೀಕ್ಷೆಯನ್ನೂ ನಡೆಸಲಾಗಿದೆ. ಎಲ್ಲ ಪರೀಕ್ಷೆಗಳು ಉತ್ತಮವಾಗಿ ನಡೆದಿದೆ ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.http://kea.kar.nic.in