ಇಬ್ರಾಹೀಂ
Update: 2017-07-03 16:47 IST
ಕೊಣಾಜೆ, ಜು. 3: ಇರಾ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಇರಾ ವಲಯ ಕಾಂಗ್ರೆಸ್ ಗೌರವಾಧ್ಯಕ್ಷರಾಗಿದ್ದ ಇಬ್ರಾಹೀಂ ಕುರಿಯಾಡಿ (70) ಸೋಮವಾರ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.
ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದ ಇಬ್ರಾಹೀಂ ಅವರು ಪತ್ನಿ, ಐವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಆಹಾರ ಸಚಿವ ಯು.ಟಿ. ಖಾದರ್, ಬಂಟ್ವಾಳ ತಾಲೂಕು ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಗ್ರಾಮ ಪಂ. ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಸಹಿತ ಹಲವು ಗಣ್ಯರು ಅಂತಿಮ ದರ್ಶನ ಪಡೆದರು.