ಗಾಂಜಾ ಮಾರಾಟ: ಮೂವರು ಬಂಧನ
Update: 2017-07-03 21:57 IST
ಮಂಗಳೂರು, ಜು. 3: ನಗರದ ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬಂಧಿತರನ್ನು ನರಿಂಗಾನದ ನಿವಾಸಿ ರಮೀಝ್ ರಾಜ್ (24), ನಾಟೆಕಲ್‌ನ ಮುಹಮ್ಮದ್ ಹನೀಫ್ (31) ಮತ್ತು ಬೆಳ್ಮದ ಇಕ್ಬಾಲ್ ಹಾರಿಸ್ (24) ಎಂದು ಗುರುತಿಸಲಾಗಿದೆ.
ಬಂಧಿತರಿಂದ 10 ಕೆ.ಜಿ. ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ನಗರದ ಫಳ್ನೀರ್ ರಸ್ತೆಯಲ್ಲಿರುವ ಹೊಟೇಲ್ ವೊಂದರಲ್ಲಿ ಕೊಠಡಿಯನ್ನು ಪಡೆದು ಗಾಂಜಾ ಇಟ್ಟು ಮಾರಾಟಕ್ಕೆ ಯತ್ನಿಸುತ್ತಿದ್ದರೆಂದು ಆರೋಪಿಸಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.