×
Ad

ವೈದ್ಯರಿಗೆ ಸಮಾಜದ ಕಾಳಜಿ ಇರಲಿ: ನ್ಯಾ.ವೆಂಕಟೇಶ್ ನಾಯ್ಕಾ

Update: 2017-07-03 22:31 IST

 ಉಡುಪಿ, ಜು.3: ವೈದ್ಯ ವೃತ್ತಿ ಎಂಬುದು ಅತ್ಯಂತ ಪವಿತ್ರವಾದ ವೃತ್ತಿ. ಇದರಲ್ಲಿ ತೊಡಗಿಸಿಕೊಳ್ಳುವವರಿಗೆ ಸಮಾಜ ಸೇವೆಯ ಕಾಳಜಿ ಇರಬೇಕು. ವೈದ್ಯರಿಗೆ ಸಮಾಜದ ಕಾಳಜಿ ಇರಬೇಕಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷ ವೆಂಕಟೇಶ್ ನಾಯ್ಕಾ ಟಿ. ಹೇಳಿದ್ದಾರೆ.

ಸೋಮವಾರ ಉಡುಪಿ ಜಿಲ್ಲಾ ವಕೀಲರ ಸಂಘದಲ್ಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉಡುಪಿ, ವಕೀಲರ ಸಂಘ ಉಡುಪಿ, ಸ್ಕೂಲ್ ಆಪ್ ಅಲೈಡ್ ಹೆಲ್ತ್ ಸೈನ್ಸ್, ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು, ಹಾಗೂ ಮಣಿಪಾಲ ವಿವಿಗಳ ಸಹಯೋಗದಲ್ಲಿ ಆಯೋಜಿಸಲಾದ ಆರೋಗ್ಯ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸೋಮವಾರ ಉಡುಪಿ ಜಿಲ್ಲಾ ವಕೀಲರ ಸಂಘದಲ್ಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉಡುಪಿ, ವಕೀಲರ ಸಂಘ ಉಡುಪಿ, ಸ್ಕೂಲ್ ಆಪ್ ಅಲೈಡ್ ಹೆಲ್ತ್ ಸೈನ್ಸ್, ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು, ಹಾಗೂ ಮಣಿಪಾಲ ವಿವಿಗಳ ಸಹಯೋಗದಲ್ಲಿ ಆಯೋಜಿಸಲಾದ ಆರೋಗ್ಯ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಪ್ರತಿಯೊಬ್ಬರೂ ತಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ಹೊಂದಿರಬೇಕು. ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದ ಅವರು, ಒತ್ತಡದಿಂದ ಕಾರ್ಯ ನಿರ್ವಹಿಸುವ ವಕೀಲರು ಮತ್ತು ನ್ಯಾಯಾಂಗ ಸಿಬ್ಬಂದಿಗಳು ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಬೇಕು ಎಂದರು.
 

ಪ್ರತಿಯೊಬ್ಬರೂ ತಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ಹೊಂದಿರಬೇಕು. ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದ ಅವರು, ಒತ್ತಡದಿಂದ ಕಾರ್ಯ ನಿರ್ವಹಿಸುವ ವಕೀಲರು ಮತ್ತು ನ್ಯಾಯಾಂಗ ಸಿಬ್ಬಂದಿಗಳು ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಬೇಕು ಎಂದರು. ಉಡುಪಿ ವಕೀಲರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಲತಾ, ಸ್ಕೂಲ್ ಆಪ್ ಅಲೈಡ್ ಹೆಲ್ತ್ ಸೈನ್ಸ್‌ನ ಡೀನ್ ಡಾ.ಬಿ.ರಾಜಶೇಖರ್, ಪ್ರಾಧ್ಯಾಪಕರಾದ ಡಾ.ಅರುಣ ಮಯ್ಯ, ಡಾ. ರಮೇಶ್, ಡಾ.ಮುರುಳೀಧರ ಕುಲಕರ್ಣಿ ಉಪಸ್ಥಿತರಿದ್ದರು.

ವಕೀಲರ ಸಂಘದ ಉಪಾಧ್ಯಕ್ಷ ಪೃಥ್ವಿರಾಜ ಹೆಗ್ಡೆ ಸ್ವಾಗತಿಸಿದರೆ, ಪ್ರದಾನ ಕಾರ್ಯದರ್ಶಿ ಸಂತೋಷ್ ಹೆಬ್ಬಾರ್ ವಂದಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀಶ ಆಚಾರ್ ಕಾರ್ಯಕ್ರಮ ನಿರೂಪಿಸಿದರು. ನ್ಯಾಯಾಂಗ ಇಲಾಖೆಯ ಸಿಬ್ಬಂದಿ ಮತ್ತು ವಕೀಲರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News