ಜಮ್ಮು: ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನ ಹತ್ಯೆ

Update: 2017-07-03 17:06 GMT

ಶ್ರೀನಗರ, ಜು.3: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಬಾಮ್ನೂ ಪ್ರದೇಶದಲ್ಲಿ ಇಂದು(ಸೋಮವಾರ) ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕ ಹತನಾಗಿದ್ದಾನೆ. ಇನ್ನಿಬ್ಬರು ಉಗ್ರರು ಮನೆಯೊಂದರಲ್ಲಿ ಅಡಗಿರುವ ಮಾಹಿತಿಯ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮುಂದುವರಿದಿದೆ.

ಖಚಿತ ಮಾಹಿತಿ ಮೇರೆಗೆ ಸೇನಾಪಡೆಯ ವಿಶೇಷ ಕಾರ್ಯಾಚರಣೆ ತಂಡ(ಎಸ್‌ಒಜಿ) ಮತ್ತು 44 ರಾಷ್ಟ್ರೀಯ ರೈಫಲ್ಸ್(ಆರ್‌ಆರ್) ತಂಡ ಈ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿತ್ತು. ಜಮ್ಮು- ಕಾಶ್ಮೀರ ಪೊಲೀಸರು ಮತ್ತು

 ಸಿಆರ್‌ಪಿಎಫ್ ಯೋಧರೂ ಶೋಧ ಕಾರ್ಯಾಚರಣೆಯಲ್ಲಿ ನೆರವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪುಲ್ವಾಮಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ನಾಗರಿಕರು , ಈ ಸಂದರ್ಭ ಉಗ್ರರ ತಂಡವೊಂದು ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಲು ನೆರವಾಗಿದ್ದರು. ಇದಾದ ಕೆಲ ಗಂಟೆಯ ಬಳಿಕ ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News