×
Ad

​ಲೋಕಾಯುಕ್ತ ದೂರು ಸಲ್ಲಿಸಲು ಕರೆ

Update: 2017-07-03 22:36 IST

ಉಡುಪಿ, ಜು.3: ಜಿಲ್ಲೆಯ ಸಾರ್ವಜನಿಕರಿಗೆ ಸರಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಲಂಚ ಕೇಳುವುದು ಇತ್ಯಾದಿ ದುರಾಡಳಿತದಲ್ಲಿ ತೊಡಗಿದ್ದರೆ ಅದರಿಂದ ತೊಂದರೆಗೆ ಒಳಗಾದವರು ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿಗೆ ಸಹಿ ಮಾಡಿದ ದೂು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
  
ಜನತೆಯ ಕುಂದುಕೊರತೆಗಳನ್ನು ನಿವಾರಿಸುವುದೇ ಈ ಸಭೆಯ ಉದ್ದೇಶ ವಾಗಿದ್ದು, ದುರುದ್ದೇಶದಿಂದ ಕೂಡಿದ ದೂರುಗಳನ್ನಾಗಲೀ ಅಥವಾ ವ್ಯರ್ಥ ವಾಗ್ವಾದಗಳನ್ನಾಗಲೀ ಮಾನ್ಯ ಮಾಡುವುದಿಲ್ಲ. ಆಡಳಿತದಲ್ಲಿ ಪಾರದರ್ಶಕತೆ ತರುವುದು ಲೋಕಾಯುಕ್ತ ಸಂಸ್ಥೆಯ ಮುಖ್ಯ ಗುರಿಯಾಗಿರುವುದರಿಂದ ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News