ಸ್ನೇಹಿತೆಯ ಹುಟ್ಟುಹಬ್ಬದ ಪಾರ್ಟಿಗೆ ತೆರಳಿದ್ದ ವಿದ್ಯಾರ್ಥಿನಿಯನ್ನು ಸಾಮೂಹಿಕ ಅತ್ಯಾಚಾರಗೈದ ಸಹಪಾಠಿಗಳು

Update: 2017-07-04 09:11 GMT

ಹೈದರಾಬಾದ್, ಜು.4: ಸ್ನೇಹಿತೆಯೊಬ್ಬಳ ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ತೆರಳಿದ್ದ 17 ವರ್ಷದ ವಿದ್ಯಾರ್ಥಿನಿಯನ್ನು ನಾಲ್ವರು ಸಹಪಾಠಿಗಳು ಸಾಮೂಹಿಕ ಅತ್ಯಾಚಾರಗೈದ ಘಟನೆ ನಡೆದಿದೆ.

ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ನಾಲ್ವರು ಸಹಪಾಠಿಗಳು ತನ್ನನ್ನು ಅತ್ಯಾಚಾರಗೈದಿರುವುದಾಗಿ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿ ಖಮ್ಮಮ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಘಟನೆಯನ್ನು ಸಹಪಾಠಿಗಳು ವಿಡಿಯೋ ಮಾಡಿರುವುದಾಗಿಯೂ ಹಾಗೂ ಈ ವಿಷಯವನ್ನು ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿರುವುದಾಗಿಯೂ ವಿದ್ಯಾರ್ಥಿನಿ ಆರೋಪಿಸಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ,

ಘಟನೆಗೆ ಸಂಬಂಧಿಸಿ ಐಪಿಸಿ ಸೆಕ್ಷನ್ ಪ್ರಕಾರ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ,

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News