ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

Update: 2017-07-04 12:54 GMT

ಚಿಕ್ಕಮಗಳೂರು, ಜು.4: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

 ಎಸ್‌ಎಸ್‌ಎಲ್‌ಸಿ, ದ್ವೀತಿಯ ಪಿಯುಸಿ, ಡಿಗ್ರಿ, ಎಂಎ, ಎಂಎಸ್‌ಸಿ, ಎಂಕಾಂ, ಎಂಬಿಎ, ಎಂಎಫ್‌ಎ, ಇಂಜಿನಿಯರ್, ಮೆಡಿಕಲ್, ವೆಟರ್‌ನರಿ, ವಿಶ್ವವಿದ್ಯಾಲಯ ಮಟ್ಟದಲ್ಲಿ ಸ್ನಾತಕೋತ್ತರ ಪದವಿಯಲ್ಲಿ 1 ರಿಂದ 5ನೆ ರ್ಯಾಂಕ್ ಪಡೆದವರಿಗೆ, ಹಾಗೂ ಕಾರ್ಯಕ್ರಮ ಕೋರ್ಸ್‌ಗಳಲ್ಲಿ ಸಿಎ, ಐಸಿಡಬ್ಲ್ಯೂಎ, ಕಂಪನಿ ಸೆಕ್ರಟರಿ, ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಎಸ್‌ಸಿ ಮುಂತಾದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ಹಾಗೂ ಶೇ. 75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಪ್ರೋತ್ಸಾಹ ಧನ ಪಡೆಯಲು ಅರ್ಹರಾಗಿರುತ್ತಾರೆ.

 ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಚಿಕ್ಕಮಗಳೂರು ಇವರನ್ನು ಸಂಪರ್ಕಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News