×
Ad

ಕಾರ್ತಿ ಚಿದಂಬರಂ ವಿರುದ್ಧದ ಪ್ರಕರಣ:ತ್ವರಿತ ವಿಚಾರಣೆಗೆ ಸುಪ್ರೀಂ ನಿರಾಕರಣೆ

Update: 2017-07-04 19:15 IST

ಹೊಸದಿಲ್ಲಿ, ಜು.4: ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯವು ದಾಖಲಿಸಿದ್ದ ಪಿಎಂಎಲ್‌ಎ (ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆ್ಯಕ್ಟ್- ಹಣ ಚಲುವೆ ಪ್ರತಿಬಂಧ ಕಾಯ್ದೆ) ಪ್ರಕರಣದ ತ್ವರಿತ ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ.

 ಭಾರತದ ಪ್ರಧಾನ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ಪೀಠವೊಂದು ಈ ಕುರಿತ ಅರ್ಜಿಯನ್ನು ತಳ್ಳಿಹಾಕಿದೆ. ಕಾರ್ತಿ ಚಿದಂಬರಂ ಅವರ ವಾದ ಆಲಿಸಲು ಮದ್ರಾಸ್ ಹೈಕೋರ್ಟ್ ಅಧಿಕಾರ ಹೊಂದಿದೆಯೇ ಎಂದು ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂಕೋರ್ಟ್ ಅನ್ನು ಕೇಳಿತು. ಇಡಿ ಜಾರಿಗೊಳಿಸಿದ ಸಮನ್ಸ್ ಅನ್ನು ಪ್ರಶ್ನಿಸಿ ಕಾರ್ತಿ ಚಿದಂಬರಂ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

   ಚೆನ್ನೈಯಲ್ಲಿರುವ ಕಾರ್ತಿ ಚಿದಂಬರಂ ನಿವಾಸ ಮೇಲೆ ಕಳೆದ ತಿಂಗಳು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರು. ಕಾರ್ತಿ ಹಾಗೂ ಇತರರ ವಿರುದ್ಧ ಸಿಬಿಐ ಎಫ್‌ಆರ್ ದಾಖಲಿಸಿದ ಬಳಿಕ ಜಾರಿ ನಿರ್ದೇಶನಾಲಯವು ಹಣ ಚಲುವೆ ಪ್ರಕರಣ ದಾಖಲಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News