ಬಿಎಸ್‌ವೈ ಮಾನನಷ್ಟ ಮೊಕದ್ದಮೆ ದಾಖಲಿಸಲಿ: ಸಿದ್ದರಾಮಯ್ಯ
Update: 2017-07-04 20:02 IST
ಬೆಂಗಳೂರು, ಜು.4: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ತನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಿದರೆ ನ್ಯಾಯಾಲಯದಲ್ಲೆ ಅದನ್ನು ಎದುರಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮೊದಲು ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಿ. ಕಾನೂನಾತ್ಮಕವಾಗಿ ಅದಕ್ಕೆ ನ್ಯಾಯಾಲಯದಲ್ಲೆ ಪ್ರತ್ಯುತ್ತರ ನೀಡುತ್ತೇನೆ ಎಂದರು.
ನನ್ನ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಆದರೂ, ನನ್ನನ್ನು ಪದೇ ಪದೇ ಜೈಲಿಗೆ ಹೋಗಿ ಬಂದವರು ಎಂದು ಸಿದ್ದರಾಮಯ್ಯ ಟೀಕಿಸುತ್ತಿದ್ದಾರೆ. ಮೂರು ದಿನಗಳಲ್ಲಿ ಈ ಬಗ್ಗೆ ಬಹಿರಂಗ ಕ್ಷಮೆ ಕೋರದಿದ್ದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಈ ಮೇಲಿನಂತೆ ಪ್ರತಿಕ್ರಿಯಿಸಿದರು.