×
Ad

ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷರಿಂದ ಡಾ.ವೀರೇಂದ್ರ ಹೆಗ್ಗಡೆ ಭೇಟಿ

Update: 2017-07-04 21:41 IST

ಉಡುಪಿ, ಜು.4: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ಎಂ.ಎ.ಗಪೂರ್, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಸೋಮವಾರ ಭೇಟಿ ಮಾಡಿ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಪ್ರಸಕ್ತ ಸಾಲಿನ ಹೊಸ ಯೋಜನೆಗಳ ಸಮಗ್ರ ಮಾಹಿತಿಯನ್ನು ನೀಡಿ ಕಳೆದ ಸಾಲಿನಲ್ಲಿ ಜೈನ ಸಮುದಾಯಕ್ಕೆ ನೀಡಿದ ಸೌಲಭ್ಯಗಳ ಪಕ್ಷಿನೋಟವನ್ನು ನೀಡಿದರು.

ರಾಜ್ಯಾದ್ಯಂತ ಜೈನ ಸಮುದಾಯದ ಪ್ರಮುಖರನ್ನು, ರುಡ್‌ಸೆಡ್ ಸಂಸ್ಥೆಯನ್ನು ಸೇರಿಸಿಕೊಂಡು ಯೋಜನೆಯನ್ನು ಅನುಷ್ಟಾನಗೊಳಿಸಬೇಕೆಂದು ಡಾ. ಹೆಗ್ಗಡೆ ಅವರು ಸಲಹೆ ನೀಡಿ ನಿಗಮದ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ನಿಗಮದ ಉಡುಪಿ ಜಿಲ್ಲಾ ವ್ಯವಸ್ಥಾಪಕ ಶ್ರೀಧರ ಭಂಡಾರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News