ತ್ಯಾಜ್ಯವನ್ನು ಚರಂಡಿಗೆ ಎಸೆಯುವುದಕ್ಕೆ ನಿಷೇಧ

Update: 2017-07-04 16:15 GMT

ಉಡುಪಿ, ಜು.4: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಚರಂಡಿಗೆ ಕಸ, ಕಡ್ಡಿಗಳನ್ನು, ಪ್ಲಾಸ್ಟಿಕ್ ತ್ಯಾಜ್ಯವನ್ನು ಎಸೆಯುವುದನ್ನು ನಿಷೇಧಿಸಲಾಗಿದೆ.

ಪ್ಲಾಸ್ಟಿಕ್ ನಿಷೇಧ ಕಾಯಿದೆ 1986ರ ಸೆಕ್ಷನ್ 5ರನ್ವಯ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿರುವ ಹಿನ್ನೆಲೆಯಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಪ್ಲಾಸ್ಟಿಕ್‌ನಿಂದ ತಯಾರಿಸಿದ ವಸ್ತುಗಳನ್ನು ಮಾರಾಟ ಮತ್ತು ಬಳಕೆ ಮಾಡದಂತೆ ಸೂಚಿಸಲಾಗಿದೆ. ಅಲ್ಲದೇ ಗೂಡಂಗಡಿಯವನ್ನು ಉಪಯೋಗಿಸಿದ ಬೋಂಡವನ್ನು ಅದೇ ದಿನ ವಿಲೇವಾರಿ ಮಾಡಲು ಸೂಚಿಸ ಲಾಗಿದೆ. ಅಂಗಡಿ ಮುಂಗಟ್ಟು, ಮನೆ ಪರಿಸರದಲ್ಲಿ ಕೊಳಚೆ ನೀರು ನಿಲ್ಲದಂತೆ ಎಚ್ಚರ ವಹಿಸುವಂತೆ ಪಟ್ಟಣ ಪಂಚಾಯತ್ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News