×
Ad

ಮತ್ತೆ ತಮಿಳುನಾಡಿನ ಕಾವೇರಿ ಕ್ಯಾತೆ ಕೋರ್ಟ್‌ನಲ್ಲಿ ರಾಜ್ಯ ಸಮರ್ಥನೆ: ಸಿಎಂ ವಿಶ್ವಾಸ

Update: 2017-07-05 17:12 IST

ಬೆಂಗಳೂರು, ಜು. 5: ಕರ್ನಾಟಕದಿಂದ ಕೂಡಲೇ ಕಾವೇರಿ ನೀರು ಹರಿಸಲು ಸೂಚಿಸುವಂತೆ ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ರಾಜ್ಯದ ಅಡ್ವೋಕೇಟ್ ಜನರಲ್ ಸಮರ್ಥವಾಗಿ ವಾದ ಮಂಡಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಅಭಾವ ಕಾಡುತ್ತಿದೆ. ಇಲ್ಲಿ ನೀರಿದ್ದರೆ ಬಿಡಲು ನಮಗೆ ಯಾವ ಅಭ್ಯಂತರವೂ ಇಲ್ಲ. ತಮಿಳುನಾಡು ಸರಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯನ್ನು ವಕೀಲರು ಸಮರ್ಥಿಸಿಕೊಳ್ಳಲಿದ್ದಾರೆ ಎಂದು ಹೇಳಿದರು.

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮತ್ತೆ ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಕುಡಿಯುವ ಉದ್ದೇಶಕ್ಕೆ ನೀರು ಬಿಡುಗಡೆ ಮಾಡಲು ನಿರ್ದೇಶನ ನೀಡುವಂತೆ ಅರ್ಜಿ ಸಲ್ಲಿಸಿದೆ. 2016ರಲ್ಲಿ ತಮಿಳುನಾಡಿಗೆ ಹರಿಸಬೇಕಿದ್ದ 5.96 ಟಿಎಂಸಿ ನೀರನ್ನು ಕರ್ನಾಟಕ ಉಳಿಸಿಕೊಂಡಿದೆ. ಈಗ ರಾಜ್ಯದಲ್ಲಿ ಭೀಕರ ಬರ ಇರುವ ಹಿನ್ನೆಲೆಯಲ್ಲಿ 2016ರಲ್ಲಿ ಬಾಕಿ ಉಳಿಸಿಕೊಂಡಿರುವ ನೀರನ್ನು ಬಿಡುಗಡೆ ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದೆ. ಕಾವೇರಿ ಕೊಳ್ಳ ಪ್ರದೇಶದಲ್ಲಿ ಬರ ಇದ್ದ ಹಿನ್ನೆಲೆಯಲ್ಲಿ ಸುಪ್ರೀಂ ತೀರ್ಪಿನ ಆದೇಶದಂತೆ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಸುಪ್ರೀಂಗೆ ಈ ಹಿಂದೆ ಮನವಿ ಮಾಡಿಕೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News