ಎಸ್ಸಿ-ಎಸ್ಟಿ, ಹಿಂ.ವರ್ಗದ ಬಡವರಿಗೆ ಉಚಿತ ಕಂಪ್ಯೂಟರ್ ತರಬೇತಿ

Update: 2017-07-05 12:02 GMT

ಬೆಂಗಳೂರು, ಜು. 5: ಪರಿಶಿಷ್ಟ ಜಾತಿ/ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಆರ್ಥಿಕವಾಗಿ ಹಿಂದುಳಿದ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಮೂರು ತಿಂಗಳ ಉಚಿತ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಗಸ್ಟ್ 8ರಿಂದ ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ತರಬೇತಿ ನೀಡಲಾಗುವುದು. ಎಸೆಸೆಲ್ಸಿ, ಪಿಯುಸಿ, ಪದವಿ, ಡಿಪ್ಲೋಮಾ ಉತ್ತೀರ್ಣ ಅಥವಾ ಅನುತ್ತೀಣರಾದ 18ರಿಂದ 38 ವರ್ಷ ವಯೋಮಿತಿಯಲ್ಲಿರುವವರು ಅರ್ಜಿ ಸಲ್ಲಿಸಬಹುದು. ಕುಟುಂಬದ ವಾರ್ಷಿಕ ಆದಾಯ 2ಲಕ್ಷ ರೂ.ಮೀರಬಾರದು.

ಆಸಕ್ತ ಅಭ್ಯರ್ಥಿಗಳು ಜು.24ರ ಬೆಳಗ್ಗೆ 11ಗಂಟೆಗೆ ನಡೆಯಲಿರುವ ಪರೀಕ್ಷೆಗೆ ಹಾಜರಾಗತಕ್ಕದ್ದು. ಇತ್ತೀಚಿನ ಎರಡು ಪಾಸ್‌ಪೋರ್ಟ್, ಎಸೆಸೆಲ್ಸಿ, ಪಿಯುಸಿ, ಪದವಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಹಾಗೂ ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್ ನಕಲು ಪ್ರತಿ ಕಡ್ಡಾಯ.
ಅರ್ಜಿಗಳನ್ನು ಕೆನರಾ ಬ್ಯಾಂಕ್ ಎಸ್ಸಿ-ಎಸ್ಟಿ ಎಂಪ್ಲಾಯಿಸ್ ವೆಲ್‌ಫೇರ್ ಅಸೋಸಿಯೇಷನ್, ಜೈ ಭೀಮ್ ಭವನ, ನಂ.16, 4ನೆ ಮಹಡಿ, ಪೂರ್ಣಿಯಾ ಥಿಯೇಟರ್ ಹತ್ತಿರ, 1ನೆ ಕ್ರಾಸ್, ಜೆ.ಸಿ.ರೋಡ್, ಬೆಂಗಳೂರು-27 ಅಥವಾ ದೂರವಾಣಿ ಸಂಖ್ಯೆ-080-22132649, 22133027ನ್ನು ಸಂಪರ್ಕಿಸಲು ನಿರ್ದೇಶಕ ಪುರುಷೋತ್ತಮ್ ದಾಸ್ ಪ್ರಕಟಣೆಯಲ್ಲಿ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News