×
Ad

ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ

Update: 2017-07-05 17:54 IST

ಮಂಗಳೂರು, ಜು.5: ಯುವಕರು ರಕ್ತದಾನ ಮಾಡಲು ಹೆಚ್ಚು ಆಸಕ್ತಿ ವಹಿಸಬೇಕು. ಆರೋಗ್ಯದ ದೃಷ್ಟಿಯಿಂದಲೂ ರಕ್ತದಾನ ಶ್ರೇಷ್ಠವಾಗಿದೆ. ಕಷ್ಟದಲ್ಲಿರುವವರಿಗೆ ಜೀವದಾನ ಮಾಡಿದ ತೃಪ್ತಿಯೂ ಲಭಿಸಲಿದೆ ಎಂದು ದ.ಕ.ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಭಿಪ್ರಾಯಪಟ್ಟರು.


ದ.ಕ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‌ನ ಆಶ್ರಯದಲ್ಲಿ ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯ ಆರ್.ಎ.ಪಿ.ಸಿ.ಸಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಹಾಗೂ ರಕ್ತದಾನಿಗಳ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದೆ ರಕ್ತಕ್ಕೆ ಪರದಾಡುವ ಪರಿಸ್ಥಿತಿ ಉಂಟಾಗಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ವಿವಿಧ ಸಂಘ ಸಂಸ್ಥೆಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುತ್ತಿದೆ. ಇಂತಹ ಸೇವೆಗಳು ಮತ್ತು ಜಾಗೃತಿ ಕಾರ್ಯಕ್ರಮಗಳು ಶ್ಲಾಘನಾರ್ಹ ಎಂದು ಮೀನಾಕ್ಷಿ ಶಾಂತಿಗೋಡು ಹೇಳಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News