×
Ad

ಮುಖ್ಯಮಂತ್ರಿಗಳ ಪ್ರವಾಸ

Update: 2017-07-05 18:55 IST

ಮಂಗಳೂರು, ಜು.5: ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಜು. 7ರಂದು ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಜುಲೈ 7 ರಂದು ಅಪರಾಹ್ನ 2.50 ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವರು. ನಂತರ ಅಡ್ಯಾರು ಆಡಿಟೋರಿಯಂ, ಕಣ್ಣೂರಿನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿರುವ ಮಂಗಳೂರು ವಲಯದ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 5 ಗಂಟೆಗೆ ದ.ಕ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ. ರಾತ್ರಿ 7.30ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News