ಸಮುದ್ರಕ್ಕೆ ಇಳಿಯುವುದನ್ನು ನಿರ್ಬಂಧಿಸಿ ಡಿ.ಸಿ ಆದೇಶ
Update: 2017-07-05 19:00 IST
ಮಂಗಳೂರು, ಜು.5: ಇತ್ತೀಚಿನ ದಿನಗಳಲ್ಲಿ ಕಡಲ ಕಿನಾರೆಗಳಲ್ಲಿ ಸತತವಾಗಿ ನಡೆಯುತ್ತಿರುವ ಅಹಿತಕರ ಘಟನೆಗಳನ್ನು ತಪ್ಪಿಸುವ ದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973ರ ಕಂ 144 ರನ್ವಯ ಉಳ್ಳಾಲ, ಸೋಮೇಶ್ವರ, ಮೊಗೀರಪಟ್ನ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಬೀಚ್‌ಗಳಲ್ಲಿ ಸಾಂಪ್ರದಾಯಿಕ ಮೀನುಗಾರರನ್ನು ಹೊರತುಪಡಿಸಿ ಇತರ ಯಾವುದೇ ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರಕ್ಕೆ ಇಳಿಯುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಿ ದ.ಕ. ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.