×
Ad

ಸುಕ್ರಿ ಬೊಮ್ಮಗೌಡ ಅಸ್ಪಸ್ಥ: ಆಸ್ಪತ್ರೆಗೆ ದಾಖಲು

Update: 2017-07-05 19:30 IST

ಬೆಂಗಳೂರು, ಜು.5: ಜಾನಪದ ಕೋಗಿಲೆ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಅಸ್ವಸ್ಥರಾಗಿದ್ದು, ನಗರದ ಬನ್ನೇರುಘಟ್ಟದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶದ ಸೋಂಕಿಗೆ ಒಳಗಾಗಿದ್ದ ಸುಕ್ರಿ ಬೊಮ್ಮಗೌಡರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಎಚ್1ಎನ್1 ಗೆ ಗುರಿಯಾಗಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ. ಆಸ್ಪತ್ರೆಯ ವೈದ್ಯರು ಅವರಿಗೆ ಚಿಕಿತ್ಸೆ ಮುಂದುವರಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸುಕ್ರಜ್ಜಿಯ ಆರೋಗ್ಯ ನೋಡಿಕೊಳ್ಳುತ್ತಿರುವ ಆಸ್ಪತ್ರೆಯ ವೈದ್ಯ ಡಾ.ಜಗದೀಶ್ ಮಾಹಿತಿ ನೀಡಿದ್ದಾರೆ.

ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಇನ್ನೂ ನಾಲ್ಕು ದಿನಗಳವರೆಗೆ ಚಿಕಿತ್ಸೆ ಮುಂದುವರಿಸಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಜು.1 ರಂದು ಜಯನಗರದ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಭಾಗವಹಿಸಲು ಅವರು ನಗರಕ್ಕೆ ಆಗಮಿಸಿದ್ದರು. ಕಳೆದ 15 ದಿನಗಳಿಂದ ಸ್ವಲ್ಪ ಪ್ರಮಾಣದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಸುಕ್ರಜ್ಜಿ ಚಿಕಿತ್ಸಾ ವೆಚ್ಚ ಭರಿಸಲು ಕ್ರಮ:  ಸುಕ್ರಿ ಬೊಮ್ಮಗೌಡ ಅವರ ಕಲಾ ಸೇವೆ ನಾಡಿಗೆ ಇನ್ನೂ ಬಹುಕಾಲ ಅಗತ್ಯವಿದೆ. ಈ ನಿಟ್ಟಿನಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ಭರಿಸಲು ಮತ್ತು ಇತರೆ ಅಗತ್ಯ ಸೌಲಭ್ಯವನ್ನು ಕಲ್ಪಿಸಲು ಸರಕಾರ ಕ್ರಮ ಕೈಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News