ಸುಪ್ರೀಂನಿಂದ ಎಸ್‌ಐಟಿಗೆ ನೋಟಿಸ್

Update: 2017-07-07 15:45 GMT

ಬೆಂಗಳೂರು, ಜು.7: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಎಸ್‌ಐಟಿಗೆ ನೋಟಿಸ್ ಜಾರಿಗೊಳಿಸಿದೆ.

ಎಸ್‌ಐಟಿ ಅವರು ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯಗಳಿಗೆ ತಪ್ಪು ಮಾಹಿತಿ ಸಲ್ಲಿಸಿದ್ದಾರೆ ಎಂದು ಎಚ್‌ಡಿಕೆ ಪರ ವಕೀಲ ಶ್ರೀಕಾಂತ ನಾಪಡೆ ಅವರು ುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದರು.ಈ ಮೇಲ್ಮನವಿ ಪರಿಗಣಿಸಿದ ನ್ಯಾಯಾಲಯವು ಎಸ್‌ಐಟಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಿು.

ಪ್ರಕರಣವೇನು: ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಂತಕಲ್ ಮೈನಿಂಗ್ ಕಂಪೆನಿಯಿಂದ ಲಂಚ ಪಡೆದು ಅಕ್ರಮ  ಗಣಿಗಾರಿಕೆಗೆ ಪರವಾನಗಿ ನೀಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಲಂಚ ರೂಪದಲ್ಲಿ ವಿಶ್ವ ಭಾರತಿ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಿಂದ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಹೆಸರಿಗೆ ನಿವೇಶನ ಹಂಚಿಕೆ ಮಾಡಲಾಗಿತ್ತು ಎಂದು ಆರೋಪಿಸಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಮತ್ತು ಜಂತಕಲ್ ಕಂಪೆನಿ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ದೂರು ಸಲ್ಲಿಕೆಯಾಗಿತ್ತು. ಈ ಹಿಂದೆ ಈ ಪ್ರಕರಣವನು ್ನ ಹೈಕೋರ್ಟ್ ರದ್ದು ಮಾಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News