ಪ್ಲಾಸ್ಟಿಕ್ ರಹಿತ ತ್ಯಾಜ್ಯ ವಿಲೇವಾರಿ ಸುಲಭ: ದಿನಕರ ಬಾಬು

Update: 2017-07-07 16:08 GMT

ಉಡುಪಿ, ಜು.7: ದಿನನಿತ್ಯದ ಬದುಕಿನಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದರಿಂದ ತ್ಯಾಜ್ಯ ವಿಲೇವಾರಿ ಸುಲಭವಾಗಲಿದೆ ಎಂದು ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.

ಶುಕ್ರವಾರ ಮಣಿಪಾಲದಲ್ಲಿರುವ ಜಿಪಂ ಸಭಾಂಗಣದಲ್ಲಿ, ಜಿಲ್ಲೆಯ ಆಯ್ದ ಗ್ರಾಪಂಗಳ ಅಧ್ಯಕ್ಷರು, ಪಿಡಿಓಗಳು, ವೈದ್ಯರು, ಶಿಕ್ಷಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಏರ್ಪಡಿಸಿದ್ದ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಕುರಿತ ಸಮಾಲೋಚನಾ ಸಭೆ/ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ತ್ಯಾಜ್ಯ ವಿಲೇವಾರಿ ಸವಾಲಿನ ಕೆಲಸ ಆಗಿದೆ. ಮನೆಯ ಕಸವನ್ನು ಪೈಪ್ ಕಾಂಪೋಸ್ಟ್ ಮೂಲಕ ವಿಲೇವಾರಿ ಮಾಡುವ ಮೂಲಕ ಹಾಗೂ ದಿನ ನಿತ್ಯದ ಬಳಕೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದರ ಮೂಲಕ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ಮಾಡಲು ಸಾಧ್ಯವಾಗಲಿದೆ ಎಂದವರು ನುಡಿದರು.

ಕಸವನ್ನು ಮೂಲದಲ್ಲೇ ವಿಂಗಡಿಸುವುದರಿಂದ ವಿಲೇವಾರಿ ಸುಲಭ ವಾಗಲಿದೆ. ಜಿಲ್ಲೆಯು ಕಳೆದ ವರ್ಷ ರಾಷ್ಟ್ರಮಟ್ಟದಲ್ಲಿ ನಡೆದ ಸಮರ್ಪಕ ತ್ಯಾಜ್ಯ ವಿಲೇವಾರಿ ಕುರಿತ ಸಮೀಕ್ಷೆಯಲ್ಲಿ 7ನೇ ಸ್ಥಾನ ಪಡೆದಿದ್ದು, ದಕ್ಷಿಣ ಭಾರತದಲ್ಲಿ ಪ್ರಥಮ ಸ್ಥಾನ ಪಡೆದಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ಹಿಂದಿಗಿಂತಲೂ ಉತ್ತಮ ಸ್ಥಾನ ಪಡೆಯಲು ಪ್ರತಿಯೊಬ್ಬರ ಹಾಗೂ ಇಲಾಖೆ ಗಳ, ಸಂಘಸಂಸ್ಥೆಗಳ ಸಹಕಾರ ಅಗತ್ಯವಿದೆ ಎಂದು ದಿನಕರ ಬಾಬು ಹೇಳಿದರು.

ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ತ್ಯಾಜ್ಯ ವಿಲೇವಾರಿ ಸವಾಲಿನ ಕೆಲಸ ಆಗಿದೆ. ಮನೆಯ ಕಸವನ್ನು ಪೈಪ್ ಕಾಂಪೋಸ್ಟ್ ಮೂಲಕ ವಿಲೇವಾರಿ ಮಾಡುವ ಮೂಲಕ ಹಾಗೂ ದಿನ ನಿತ್ಯದ ಬಳಕೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದರ ಮೂಲಕ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ಮಾಡಲು ಸಾಧ್ಯವಾಗಲಿದೆ ಎಂದವರು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News