ವಿಶೇಷ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

Update: 2017-07-08 10:02 GMT

ಮಂಗಳೂರು, ಜು.7: ದ.ಕ. ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ, ಸರ್ವ ಶಿಕ್ಷಣ ಅಭಿಯಾನ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ಉತ್ತರ ವಲಯ, ರೋಟರಿ ಕ್ಲಬ್ ಮಂಗಳೂರು ನಾರ್ತ್ ಇವರ ಸಹಯೋಗದಲ್ಲಿ ಸ್ಕಂದ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರವು ಗಾಂಧಿನಗರ ರೋಟರಿ ಬಾಲಭವನದಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ವಾಲ್ಟರ್ ಡಿಮೆಲ್ಲೊ ಮಾತನಾಡಿ, ವಿದ್ಯಾರ್ಥಿಗಳು ಸ್ಥೈರ್ಯ ಬೆಳೆಸಿಕೊಳ್ಳಬೇಕು. ಇಲಾಖೆಯು ನೀಡುತ್ತಿರುವ ಸವಲತ್ತುಗಳನ್ನು ಬಳಸಿಕೊಳ್ಳಬೇಕು ಎಂದರು.

ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿಗಳು ಲೋಕೇಶ್ ಸಿ. ಕಾರ್ಯಕ್ರಮ ಉದ್ಘಾಟಿಸಿ, ವಿಶಿಷ್ಟ ಚೇತನರಿಗೆ ಸೂಕ್ತವಾದ ಮಾರ್ಗದರ್ಶನ ನೀಡಿ ಬೆಳಕಿಗೆ ತರುವ ಪ್ರಯತ್ನವನ್ನು ಮಾಡಬೇಕು ಹಾಗೂ ಇಲಾಖೆಯಿಂದ ದೊರೆಯುವ ಸವಲತ್ತುಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ರೋಟರಿ ಕ್ಲಬ್ ಮಂಗಳೂರು ನಾರ್ತ್ ಅಧ್ಯಕ್ಷ ಪ್ರಸನ್ನ ಮಲ್ಯ ರೋಟರಿ ಕ್ಲಬ್ ಸದಾ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಸಹಕಾರವನ್ನು ನೀಡುತ್ತದೆ ಎಂದರು.

ಶಿಬಿರದಲ್ಲಿ ಜಿಲ್ಲಾ ಸಹಾಯಕ ಯೋಜನಾ ಸಮನ್ವಯಾಧಿಕಾರಿ ಗೀತಾ ಜೇಮ್ಸ್ ಕುಟಿನ್ಹೊ, ಲಯನ್ಸ್ ಮತ್ತು ಲಿಯೋ ಕ್ಲಬಿನ ಸದಸ್ಯೆ ಕಲಾ ದೀಪಕ್, ಪ್ರೌಢಶಾಲೆಯ ಸಂಯೋಜಕ ಉಸ್ಮಾನ್, ರೋಟರಿ ಕ್ಲಬಿನ ಕಾರ್ಯದರ್ಶಿ ಮೋಹನ್ ನಾಯರ್, ವಲಯದ ಎಲ್ಲಾ ಬಿ.ಆರ್.ಪಿ. ಹಾಗೂ ಸಿ.ಆರ್.ಪಿ. ಮತ್ತಿತರರು ಉಪಸ್ಥಿತರಿದ್ದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News