ಟಿಪ್ಪರ್ ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2017-07-08 22:29 IST
ಶಂಕರನಾರಾಯಣ, ಜು.8: ಟಿಪ್ಪರ್ ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಅಂಪಾರು ಗ್ರಾಮದ ಮೂಡಬಗೆ ಮಸ್ವಾಡಿ ಎಂಬಲ್ಲಿ ಜು.7ರಂದು ಸಂಜೆ 5:30ರ ಸುಮಾರಿಗೆ ನಡೆದಿದೆ.
ಮೃತರನ್ನು ಬೈಕ್ ಸವಾರ ಶಿವಕುಮಾರ್ ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ರವಿ ಎಂಬವರು ತೀವ್ರವಾಗಿ ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಿದ್ದಾಪುರ ಕಡೆಯಿಂದ ಅಂಪಾರು ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿಯು ಅಂಪಾರು ಕಡೆಯಿಂದ ಕುಂದಾಪುರ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತು. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯ ಗೊಂಡ ಶಿವಕುಮಾರ್ ಸ್ಥಳದಲ್ಲಿಯೇ ಮೃತಪಟ್ಟರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.