ಜು.20ರಂದು ಮಹಿಳಾ ಸಮಾವೇಶ: ದೇವೇಗೌಡ
ಬೆಂಗಳೂರು, ಜು.9: ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಜು.20ರ ಗುರುವಾರ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಮಹಿಳಾ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ರವಿವಾರ ನಗರದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಾವು ಪ್ರಧಾನಿಯಾಗಿದ್ದಾಗ ಮಹಿಳೆಯರಿಗೆ ರಾಜಕೀಯದಲ್ಲಿ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಲು ಶ್ರಮಿಸಿ ಯಶಸ್ವಿಯಾದೆ. ಅದೇ ರೀತಿಯಾಗಿ ಲೋಕಸಭೆಯಲ್ಲೂ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡುವುದಕ್ಕಾಗಿ ಹಳೆಯ ಬಿಲ್‌ನ್ನು ತಿದ್ದುಪಡಿ ಮಾಡಿ ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದೆ. ಆದರೆ, ಆ ಬಿಲ್ ಲೋಕಸಭೆಯಲ್ಲಿ ಪಾಸಾಗುತ್ತಿಲ್ಲ. ಹೀಗಾಗಿ, ಈ ಬಿಲ್‌ನ್ನು ಪಾಸು ಮಾಡುವಂತೆ ಒತ್ತಾಯಿಸಲು ಜು.20ರಂದು ರಾಜ್ಯ ಮಟ್ಟದ ಮಹಿಳಾ ಸಮಾವೇಶವನ್ನು ಹವಿ ್ಮುಕೊಳ್ಳಲಾಗಿದೆ ಎಂದು ಹೇಳಿದರು.
ಅಟಲ್ ಬಿಹಾರಿ ವಾಜಪೇಯಿ ಹಾಗೂ ಮನಮೋಹನ್‌ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಮಹಿಳಾ ಮೀಸಲಾತಿ ಬಿಲ್ ಪಾಸಾಗಬೇಕಾಗಿತ್ತು. ಆದರೆ, ಕಾರಣಾಂತರಗಳಿಂದ ಪಾಸಾಗಲಿಲ್ಲ. ಆದರೆ, ಈಗ ನರೇಂದ್ರ ಮೋದಿ ಸರಕಾರದಲ್ಲಿ ಈ ಬಿಲ್‌ನ್ನು ಪಾಸ್ ಮಾಡಿಸಲು ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.