ಪರೀಕ್ಷೆಯಲ್ಲಿ ಅನುತ್ತೀರ್ಣಗೊಳ್ಳುವ ಭಯ: ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
Update: 2017-07-09 18:42 IST
ಶಿವಮೊಗ್ಗ, ಜು. 9: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಳ್ಳುವ ಭಯದಿಂದ ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಜೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಗೌತಮಪುರ ಗ್ರಾಮದಲ್ಲಿ ವರದಿಯಾಗಿದೆ.
ಭೂಮಿಕ (16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಬಾಲಕಿಯು ರಿಪ್ಪನ್‌ಪೇಟೆಯ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಅಭ್ಯಾಸ ಮಾಡುತ್ತಿದ್ದಳು. ಇತ್ತೀಚೆಗೆ ಸಪ್ಲಿಮೆಂಟರಿ ಪರೀಕ್ಷೆ ಬರೆದಿದ್ದಳು. ಈ ಪರೀಕ್ಷೆಯಲ್ಲಿಯೂ ಎಲ್ಲಿ ಅನುತ್ತೀರ್ಣಳಾಗುತ್ತೇನೆ ಎಂಬ ಆತಂಕದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.