×
Ad

ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾಗಿ ವಿ.ನಾಗೇಂದ್ರ ಪ್ರಸಾದ್ ಆಯ್ಕೆ

Update: 2017-07-09 19:00 IST

ಬೆಂಗಳೂರು, ಜು.9: ರಾಜ್ಯ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾಗಿ ವಿ.ನಾಗೇಂದ್ರ ಪ್ರಸಾದ್ ಆಯ್ಕೆಯಾಗಿದ್ದಾರೆ. ನಿರ್ದೇಶಕರ ಸಂಘದ ಚುನಾವಣೆ ತೀವ್ರ ಕುತೂಹಲ ಕೆರಳಿಸಿತ್ತು. ರಾಜಧಾನಿ ಬೆಂಗಳೂರಿನ ರಾಜಾಜಿನಗರದಲ್ಲಿ ವಾರಾಂತ್ಯ ದಿನವಾದ ರವಿವಾರ ನಡೆದ ಈ ಚುನಾವಣೆ ಕನ್ನಡ ಚಲನಚಿತ್ರ ರಂಗದಲ್ಲಿ ಕುತೂಹಲದ ಕೇಂದ್ರಬಿಂದುವಾಗಿತ್ತು. 

ಕೊಂಡಜ್ಜಿ ಬಸಪ್ಪ ಸಭಾಭವನದಲ್ಲಿ ಸ್ಯಾಂಡಲ್ ವುಡ್ ನ ಬಹುತೇಕ ನಿರ್ದೇಶಕರು ಜಮಾಯಿಸಿ ನಿರ್ದೇಶಕ ಸಂಘದ ನಾಯಕನ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.

ಅಂತಿಮವಾಗಿ ವಿ.ನಾಗೇಂದ್ರ ಪ್ರಸಾದ್ ಅವರನ್ನು ರಾಜ್ಯ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಜೋಸೈಮನ್ ಆಯ್ಕೆಯಾದರು. ಇದೇ ವೇಳೆ, ಕಾರ್ಯಕಾರಿ ಸಮಿತಿ ಸದಸ್ಯರನ್ನೂ ಆಯ್ಕೆ ಮಾಡಲಾಯಿತು. ದಯಾಳ್ ಪದ್ಮನಾಬ್, ಮುಸ್ಸಂಜೆ ಮಹೇಶ್, ಗುರುಪ್ರಸಾದ್, ಶಿವಕುಮಾರ್, ಮುರಳಿ ಮೋಹನ್, ಸುನೀಲ್ ಪುರಣಾಕಿ, ಚಂದ್ರಹಾಸ್ ಸೇರಿದಂತೆ 15 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News