×
Ad

ಗೃಹಿಣಿ ಅನುಮಾನಾಸ್ಪದ ಸಾವು

Update: 2017-07-09 21:29 IST

ನಾಗಮಂಗಲ, ಜು.9: ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲೂಕಿನ ತಿಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೃಷ್ಣ ಅವರ ಪತ್ನಿ ಗೀತಾ (35) ಅವರ ಶವ ಶನಿವಾರ ತಡರಾತ್ರಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೃಷ್ಣ ಗೀತಾ ದಂಪತಿಗೆ 4 ವರ್ಷದ ಗಂಡು ಮಗುವಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಪತ್ನಿ ನಡುವೆ ಶನಿವಾರ ರಾತ್ರಿ ಜಗಳವಾಗಿ ಪತಿ ಆಕೆಯ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ರವಿವಾರ ಬೆಳಗ್ಗೆ ಆಕೆಯ ಶವ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.
ಮೃತ ಮಹಿಳೆಯ ಪೋಷಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು, ಪತಿ ಕೃಷ್ಣನನ್ನು ವಶಕ್ಕೆ ತೆಗೆದುಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News