ಬೀಗುವ ಬದಲು ಬಾಗುವಿಕೆ ರೂಪಿಸಿಕೊಳ್ಳಿ: ಅದಮಾರು ಶ್ರೀ
Update: 2017-07-10 20:32 IST
ಉಡುಪಿ, ಜು.10: ಗುರುತ್ವದ ಮುಂದೆ ಬೀಗುವ ಬದಲು ಬಾಗುವಿಕೆಯನ್ನು ರೂಪಿಸಿಕೊಳ್ಳಬೇಕು ಎಂದು ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಉಡುಪಿ ಪೂರ್ಣಪ್ರಜ್ಞ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಇತ್ತೀಚೆಗೆ ಆಯೋಜಿಸಲಾದ ಸಂಸ್ಥಾಪಕರ ದಿನಾಚರಣೆಯಲ್ಲಿ ಅವರು ಆಶೀವರ್ಚನ ನೀಡಿದರು.
ರಂಗಕರ್ಮಿ ಪ್ರೊ.ಉದ್ಯಾವರ ಮಾಧವ ಆಚಾರ್ಯ ಸಂಸ್ಮರಣಾ ಭಾಷಣ ಮಾಡಿದರು. ಕಾಲೇಜು ಆಡಳಿತ ಮಂಡಳಿಯ ಪ್ರದೀಪ್ ಕುಮಾರ್, ಪೂರ್ಣ ಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ.ಬಿ. ಜಗದೀಶ ಶೆಟ್ಟಿ, ಪಿ.ಯು. ಕಾಲೇಜಿನ ಪ್ರಾಂಶುಪಾಲ ಸಂದೀಪ್‌ಕುಮಾರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶ್ರೀವಿಬುಧೇಶ ತೀರ್ಥರ ಭಾವಚಿತ್ರಕ್ಕೆ ನಮನ ಸಲ್ಲಿಸಲಾಯಿತು. ವಿವಿಧ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾ ಯಿತು. ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಸುಕನ್ಯಾ ಮೇರಿ ಸ್ವಾಗತಿಸಿದರು. ಉಪನ್ಯಾಸಕಿ ಶಾಲಿನಿ ವಂದಿಸಿದರು. ಉಪನ್ಯಾಸಕ ರಮಾನಂದ ರಾವ್ ಕಾರ್ಯಕ್ರಮ ನಿರೂಪಿಸಿದರು.