ಉತ್ತಮ ಕಲಿಕೆಯ ಮೂಲಕ ಬದುಕಿನಲ್ಲಿ ಯಶಸ್ಸು: ಸೊರಕೆ
Update: 2017-07-10 20:41 IST
ಪೆರ್ಡೂರು, ಜು.10: ಸರಕಾರ ಒದಗಿಸುವ ಶೈಕ್ಷಣಿಕ ಸೌಲಭ್ಯಗಳನ್ನು ಮಕ್ಕಳು ಸಾರ್ಥಕವಾಗಿ ಉಪಯೋಗಿಸಿಕೊಳ್ಳಬೇಕು. ಹಾಗೆ ಉತ್ತಮ ಕಲಿಕೆಯ ಮೂಲಕ ಬದುಕಿನಲ್ಲಿ ಯಶಸ್ಸು ಗಳಿಸಬೇಕು ಎಂದು ಕಾಪು ಶಾಸಕ ವಿನಯಕುಮಾರ್ ಸೊರಕೆ ಹೇಳಿದ್ದಾರೆ.
ಪೆರ್ಡೂರು ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿಗಳ ಸೈಕಲ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾಂಭವಿ ಕುಲಾಲ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯ ಎಚ್.ಎಸ್.ಗಣೇಶ ಭಟ್, ಸ್ಥಳೀಯ ಆಡಳಿತ ಮಂಡಳಿಯ ಉಪಾಧ್ಯಕ್ಷ ಶಾಂತಾರಾಮ ಸೂಡ ಉಪಸ್ಥಿತರಿದ್ದರು. ಹಿರಿಯ ಶಿಕ್ಷಕ ಜಿ.ಪಿ.ಪ್ರಭಾಕರ ಸ್ವಾಗತಿಸಿ, ವಂದಿಸಿದರು.