ಅಂತಾರಾಷ್ಟ್ರೀಯ ಮಾದಕ ದ್ರವ್ಯಗಳ ನಿರ್ಮೂಲನೆ ಸಪ್ತಾಹ
Update: 2017-07-10 20:42 IST
ಉಡುಪಿ, ಜು.10: ಇಂದಿನ ಎಳೆಯ ತಲೆಮಾರು ಮಾದಕ ದ್ರವ್ಯಗಳ ಸೇವನೆಗೆ ಬಲಿಯಾಗುತ್ತಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಈ ನಿಟ್ಟಿನಲ್ಲಿ ಯುವಜನಾಂಗ ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿ ಸಮುದಾಯ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಉಡುಪಿಯ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ಮನೋವೈದ್ಯ ಡಾ.ನಾಗರಾಜ ಮೂರ್ತಿ ಹೇಳಿದ್ದಾರೆ.
ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಲಾದ ಅಂತಾರಾಷ್ಟ್ರೀಯ ಮಾದಕ ದ್ರವ್ಯಗಳ ನಿರ್ಮೂಲನ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಜೆಸಿಐ ಉಡುಪಿ ಸಿವ್ವರ್ ಸಿಟಿ ಅಧ್ಯಕ್ಷೆ ಜ್ಯೋತಿ ರಮಾನಂದ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ಕಾಲೇಜಿನ ಐಕ್ಯೂಎಸಿ ಸಂಯೋಜಕ ಡಾ.ಜಯರಾಮ್ ಶೆಟ್ಟಿಗಾರ್ ಉಪಸ್ಥಿತರಿದ್ದರು.
ಡೆಲ್ಸನ್ ಸ್ವಾಗತಿಸಿ, ಶಹೀಮ್ ವಂದಿಸಿದರು. ಪ್ರತೀಕ್ಷಾ ಕಾರ್ಯಕ್ರಮ ನಿರೂಪಿಸಿದರು.