×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2017-07-10 23:27 IST

ಕಾರ್ಕಳ, ಜು.10: ನಿಟ್ಟೆ ಗ್ರಾಮದ ಬೋರ್ಗಲ್ ಗುಡ್ಡೆ ನಿವಾಸಿ ಅರುಣ್ ಜೈನ್(50) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಜು.10 ರಂದು ಬೆಳಗ್ಗೆ ಮನೆಯ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟ:  ಟೈಲರಿಂಗ್ ಕೆಲಸ ಮಾಡುತ್ತಿದ್ದ ತೆಕ್ಕಟ್ಟೆ ಗ್ರಾಮದ ದೇವಾಡಿಗರ ಬೆಟ್ಟು ನಿವಾಸಿ ಸತೀಶ ದೇವಾಡಿಗ (47) ಎಂಬವರು ಜು.10ರಂದು ಬೆಳಗ್ಗೆ ಮನೆಯ ಎಡಬದಿಯಲ್ಲಿರುವ ಟೈಲರಿಂಗ್ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News