​ಎಂಜಿನಿಯರಿಂಗ್ ಪದವಿಗೆ ಯೋಗ ಕಡ್ಡಾಯ

Update: 2017-07-11 04:15 GMT

ಹೊಸದಿಲ್ಲಿ, ಜು.11: ಎಂಜಿನಿಯರಿಂಗ್ ಪದವಿ ಪಡೆಯಬೇಕಿದ್ದರೆ ಇನ್ನು ಮುಂದೆ ಯೋಗ, ಕ್ರೀಡೆ ಅಥವಾ ಇತರ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಕಡ್ಡಾಯ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ವಿಷಯಗಳ ಜತೆಗೆ ಇದನ್ನೂ ಕಲಿಯುವುದು ಕಡ್ಡಾಯವಾಗಿರುತ್ತದೆ.

ಈ ಮೊದಲು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್), ಎನ್‌ಸಿಸಿ ಹಾಗೂ ಉನ್ನತ್ ಭಾರತ್ ಅಭಿಯಾನದಂಥ ಸೌಲಭ್ಯಗಳು ಇದ್ದರೂ, ಪದವಿ ಪಡೆಯಲು ಇದು ಕಡ್ಡಾಯವಾಗಿರಲಿಲ್ಲ. ಆದರೆ ಇದೀಗ ಎಂಜಿನಿಯರಿಂಗ್ ಶಿಕ್ಷಣ ಸಂಬಂಧ ನಿರ್ಧಾರ ಕೈಗೊಳ್ಳುವ ಅತ್ಯುನ್ನತ ಸಂಸ್ಥೆಯಾದ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಇದನ್ನು ಕಡ್ಡಾಯಗೊಳಿಸಿದೆ.

ಇದಕ್ಕೆ ಯಾವುದೇ ಅಂಕ ಇಲ್ಲದಿದ್ದರೂ, ವಿದ್ಯಾರ್ಥಿಗಳು ಇಂಥ ಚಟುವಟಿಕೆಗಳಲ್ಲಿ ಕನಿಷ್ಠ ಶೇಕಡ 25ರಷ್ಟು ಹಾಜರಾತಿ ಹೊಂದಿರುವುದು ಕಡ್ಡಾಯ. ಇದು ವಿದ್ಯಾರ್ಥಿಗಳ ಸಮಗ್ರ ವಿಕಾಸಕ್ಕೆ ಪೂರಕವಾಗಲಿದೆ ಎನ್ನುವುದು ಅಧಿಕಾರಿಗಳ ಸಮರ್ಥನೆ.

ಇದು ವಿದ್ಯಾರ್ಥಿಗಳಿಗೆ ಹಾಗೂ ಸಮಾಜಕ್ಕೆ ಅನುಕೂಲ ಎಂದು ಎಐಸಿಟಿಇ ಅಧಿಕಾರಿಯೊಬ್ಬರು ಹೇಳಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News