ಆಡಳಿತದ ಸೂತ್ರ ಹಿಡಿದವರಿಂದಲೇ ದಕ್ಷಿಣ ಕನ್ನಡದಲ್ಲಿ ಅಹಿತಕರ ಘಟನೆ: ಸಚಿವ ಡಿವಿ

Update: 2017-07-11 08:09 GMT

ಬಂಟ್ವಾಳ, ಜು.11: ಆಡಳಿತ ಸೂತ ಹಿಡಿದವರಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯುತ್ತಿವೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಆರೋಪಿಸಿದ್ದಾರೆ.

ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಸಜಿಪ ಗ್ರಾಮದಲ್ಲಿರುವ ಮನೆಗೆ ಇಂದು ಬೆಳಗ್ಗೆ ಭೇಟಿ ನೀಡಿದ ಸಚಿವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಬೆಂಕಿಗೆ ತುಪ್ಪ ಸುರಿಯುತ್ತಿರುವವರು ಯಾರು ಎಂಬುದನ್ನು ಮಂಗಳೂರಿನಲ್ಲಿ ಅಪರಾಹ್ನ ಕರೆಯುವ ಸುದ್ದಿಗೋಷ್ಠಿಯಲ್ಲಿ ತಿಳಿಸುತ್ತೇನೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ಇಂದು ಅಪರಾಹ್ನ 2 ಗಂಟೆಗೆ ದ.ಕ. ಜಿಲ್ಲಾಧಿಕಾರಿ, ಐಜಿಪಿ, ಎಸ್ಪಿಯವರೊಂದಿಗೆ ಸಭೆ ನಡೆಸಿ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮಾಹಿತು ಪಡೆಯಲಿದ್ದೇನೆ ಎಂದರು.
ಆರೆಸ್ಸೆಸ್ ಕಾರ್ಯಕರ್ತ ಅಮಾಯಕ ಶರತ್ ಹತ್ಯೆ ಖಂಡನೀಯ. ಮನೆಗೆ ಆಧಾರವಾಗಿದ್ದ ಪುತ್ರನನ್ನು ಕಳೆದುಕೊಂಡು ದುಃಖದಲ್ಲಿರುವ ತಂದೆಗೆ ಸಾಂತ್ವನ ಹೇಳುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇನೆ. ಒಬ್ಬ ಶರತ್ ಕೊಲೆ ಆಗಿದ್ದರೂ ನೂರು ಶರತ್‌ಗಳು ಹುಟ್ಟಿಬಂದು ದುಷ್ಕರ್ಮಿಗಳಿಗೆ ಪಾಠ ಕಲಿಸಲಿದ್ದಾರೆ ಎಂದು ಸಚಿವರು ನುಡಿದರು.

ಶರತ್ ಅವರ ತಂದೆ ತನಿಯಪ್ಪರೊಂದಿಗೆ ಮಾತುಕತೆ ನಡೆಸಿದ ಸಚಿವರು ಅವರಿಗೆ ಸಾಂತ್ವನ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News