×
Ad

ಜನಸಂಖ್ಯೆ ನಿಯಂತ್ರಣದಿಂದ ಅಭಿವೃದ್ಧಿ ಸಾಧ್ಯ: ದಿನಕರ ಬಾಬು

Update: 2017-07-11 20:14 IST

ಉಡುಪಿ, ಜು.11: ಮಾನವ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಳ್ಳದೆ ಇದ್ದಲ್ಲಿ ಹಾಗೂ ಜಗತ್ತಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸದಿದ್ದಲ್ಲಿ ಅಭಿವೃದ್ಧಿ ಕುಂಠಿತವಾಗಲಿದೆ ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಅಭಿಪ್ರಾಯ ಪಟ್ಟಿದ್ದಾರೆ.

ಉಡುಪಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂ ಜಿಲ್ಲಾ ಶಾಖೆ, ಸರಕಾರಿ ಬಾಲಕಿ ಯರ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾದ ಜಿಲ್ಲಾ ಮಟ್ಟದ ವಿಶ್ವ ಜನ ಸಂಖ್ಯಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಮಾನವನ ಮಿತಿ ಮೀರಿದ ಆಸೆ ಆಕಾಂಕ್ಷೆ ಹಾಗೂ ಮುಂದಿನ ಪೀಳಿಗೆಯ ಭವಿಷ್ಯ ಅರಿಯದ ಪರಿಣಾಮ ಜನಸಂಖ್ಯಾ ಸ್ಪೋಟ ಸಂಭವಿಸುತ್ತಿದೆ. ಕಳೆದ 30 ವರ್ಷಗಳಿಂದ ಜನಸಂಖ್ಯಾ ದಿನಾಚರಣೆಯನ್ನು ಆಚರಿಸಿಕೊಂಡು ಬರುತ್ತಿ ದ್ದರೂ ನಾವು ಇದರ ನಿಯಂತ್ರಣದಲ್ಲಿ ಯಾವುದೇ ಯಶಸ್ಸು ಕಂಡಿಲ್ಲ ಎಂದು ಅವರು ಹೇಳಿದರು.

ಆರೋಗ್ಯಕರ ಜೀವನ ಶೈಲಿ ಕುರಿತು ಉಪನ್ಯಾಸ ನೀಡಿದ ಡಾ.ಮನೋಜ್ ಜಾನ್ಸನ್ ಮಾತನಾಡಿ, ದಿನನಿತ್ಯದ ಆಹಾರ ಸೇವನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತರಕಾರಿ ಸೇವನೆ, ಪೋಷಕಾಂಶಯುಕ್ತ ಆಹಾರ ಸೇವನೆ ಹಾಗೂ ಹೆಚ್ಚಿನ ನೀರು ಕುಡಿಯುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.

ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಕರಪತ್ರ ಬಿಡುಗಡೆಗೊಳಿಸಿದರು. ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಅಧ್ಯಕ್ಷತೆ ವಹಿಸಿದ್ದರು. ಜನಸಂಖ್ಯೆ ದಿನಾಚರಣೆ ಪ್ರಯುಕ್ತ ಏರ್ಪಡಿಸಲಾಗಿದ್ದ ರಸಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಪ್ರಭಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಜಿ.ರಾಮ, ಜಿಲ್ಲಾ ವಾರ್ತಾಧಿ ಕಾರಿ ರೋಹಿಣಿ ಕೆ., ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್, ಪ್ರೌಢ ಶಾಲೆ ವಿಬಾಗದ ಮುಖ್ಯೋಪಾಧ್ಯಾಯ ವಿಶ್ವನಾಥ ಬಾಯರಿ, ಜಿಲ್ಲಾ ಸರಕಾರಿ ನೌಕರರ ಸಂಘಧ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಉಪಸ್ಥಿತರಿದ್ದರು.

ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರತ್ನ ಸ್ವಾಗತಿಸಿದರು. ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀರಾಮರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ವಂದಿಸಿದರು. ಉಪನ್ಯಾಸಕ ದಯಾನಂದ್ ಕಾರ್ಯಕ್ರಮ ನಿರೂಪಿಸಿದರು. ಜಾಥಾ ಕಾರ್ಯಕ್ರಮ ಹಾಗೂ ಆಶಾ ಕಾರ್ಯ ಕರ್ತೆಯರಿಂದ ಕಿರು ನಾಟಕ ಪ್ರದರ್ಶನ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News