ಶಂಕಿತ ಇಲಿಜ್ವರ: ವಿದ್ಯಾರ್ಥಿ ಮೃತ್ಯು
Update: 2017-07-11 20:37 IST
ಬೆಳ್ತಂಗಡಿ, ಜು.11: ಕಳೆಂಜ ಗ್ರಾಮದ ಕಾರ್ಯತಡ್ಕದ ಮರಕ್ಕಡ ಆನಂದ ಗೌಡ ಎಂಬವರ ಪುತ್ರ ವಿದ್ಯಾರ್ಥಿ ವೆಂಕಟೇಶ್ (17) ಎಂಬವರು ಮಂಗಳವಾರ
ಶಂಕಿತ ಇಲಿ ಜ್ವರಕ್ಕೆ ಬಲಿಯಾಗಿದ್ದಾರೆ. ವೆಂಕಟೇಶ ಕಳೆದ ಒಂದು ವಾರದಿಂದ ಜ್ವರ ಹಾಗು ಬೆನ್ನುನೋವಿಗೆ ಒಳಗಾಗಿದ್ದರು. ಆರಂಭದಲ್ಲಿ ಸ್ಥಳೀಯ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಈತ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಈತ ಬೆಳ್ತಂಗಡಿ ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಯಾಗಿದ್ದು, ಉತ್ತಮ ಕ್ರೀಡಾಪಟು ಆಗಿದ್ದರು. ಕಾಲೇಜಿಗೆ ರಜೆ ಘೋಷಿಸಲಾಗಿದೆ. ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಪದಾಧಿಕಾರಿಗಳು, ಸದಸ್ಯರು, ಪ್ರಾಚಾರ್ಯರು, ಉಪನ್ಯಾಸಕರು ಸಂತಾಪ ವ್ಯಕ್ತಪಡಿಸಿದ್ದಾರೆ.