×
Ad

ಎಸ್.ಸಿ.ಜಯಚಂದ್ರಗೆ ಹೈಕೋರ್ಟ್‌ನಿಂದ ಜಾಮೀನು

Update: 2017-07-11 21:33 IST

ಬೆಂಗಳೂರು, ಜು.11: ಅಕ್ರಮ ಹಣ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣದಲ್ಲಿ ರಾಜ್ಯ ಹೆದ್ದಾರಿ ಯೋಜನಾ ಪ್ರಾಧಿಕಾರದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಎಸ್.ಸಿ.ಜಯಚಂದ್ರಗೆ ಹೈಕೋರ್ಟ್ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಸಂಬಂಧ ಜಾಮೀನು ಕೋರಿ ಎಸ್.ಸಿ.ಜಯಚಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು. ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು, ಇಡಿ ಅವರು ಎಸ್.ಸಿ.ಜಯಚಂದ್ರ ಅವರ ಮೇಲೆ 2009ರ ಪಿಎಂಎಲ್ ಕಾಯ್ದೆ ಅನುಸಾರ ಪ್ರಕರಣ ದಾಖಲಿಸಬೇಕಾಗಿತ್ತು. ಆದರೆ, ಇಡಿ ಅವರು 2008ರ ಕಾಯ್ದೆ ಅನುಸಾರ ಪ್ರಕರಣ ದಾಖಲಿಸಿದ್ದಾರೆ. ಹೀಗಾಗಿ, ಇವರಿಗೆ ಜಾಮೀನು ಮಂಜೂರು ಮಾಡಬೇಕೆಂದು ಪೀಠಕ್ಕೆ ಮನವಿ ಮಾಡಿದರು. ಅಲ್ಲದೆ, ಮಾಜಿ ಸಚಿವ ಜನಾರ್ಧನ್‌ರೆಡ್ಡಿಗೆ 2009ರ ಪಿಎಂಎಲ್ ಕಾಯ್ದೆ ಅನುಸಾರ ಪ್ರಕರಣ ದಾಖಲಿಸಿದ ಹಿನ್ನೆಲೆಯಲ್ಲಿ ಕೆಳ ನ್ಯಾಯಾಲಯ ಜಾಮೀನು ನೀಡಿತ್ತು. ಹೀಗಾಗಿ, ಈ ಪ್ರಕರಣಕ್ಕೂ ಜಾಮೀನು ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು.

ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠವು ಜಯಚಂದ್ರ ಅವರಿಗೆ ವಿಚಾರಣೆಗೆ ಸಹಕರಿಸಬೇಕು. ಸಾಕ್ಷನಾಶಪಡಿಸಬಾರದು. ಅಕ್ರಮ ಚಟುವಟಿಕೆಯಲ್ಲಿ ತೊಡಗಬಾರದು. ಒಂದು ಲಕ್ಷ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡಬೇಕೆಂಬ ಷರತ್ತನ್ನು ವಿಧೀಸಿ ಜಾಮೀನು ಮಂಜೂರು ಮಾಡಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News