ವಿಕಲಚೇತನರಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಉಡುಪಿ, ಜು.12: ರಾಜ್ಯ ಸರಕಾರದ ಯೋಜನೆಯಲ್ಲಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, ವಿದ್ಯಾರ್ಥಿ ವೇತನಕ್ಕೆ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ಯಿಂದ ಅರ್ಜಿ ಪಡೆದು ಸಲ್ಲಿಸಬಹುದಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವಾಲಯದಿಂದ ಅಂಗವಿಕಲ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ 9-10ನೇ ತರಗತಿ, ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್- 9ನೇ ತರಗತಿಯಿಂದ ಮಾಸ್ಟರ್ ಡಿಗ್ರಿ ಅಥವಾ ಡಿಪ್ಲೋಮಾವರೆಗೆ, ಟಾಪ್‌ಕ್ಲಾಸ್ ಸ್ಕಾಲರ್‌ಶಿಪ್ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾ ಹೀಗೆ ಮೂರು ವಿಭಾಗಗಳಲ್ಲಿ ವಿದ್ಯಾರ್ಥಿ ವೇತನ ವನ್ನು ನೀಡಲಾಗುತ್ತಿದೆ.
ಇದಕ್ಕಾಗಿ ಆನ್‌ಲೈನ್ ಮೂಲಕ -www.disabilityaffairs.gov.in- www.uqc.ac.inವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ ಇದರ ಬಗ್ಗೆ ಲಿಖಿತ ಮಾಹಿತಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಕಚೇರಿಗೆ ನೀಡಬೇಕು. ರಾಷ್ಟ್ರೀಯ ಫೆಲೋಶಿಪ್‌ಗಾಗಿ ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು- -ನಿಂದ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.