ನಾಳೆ ಎಸೆಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
Update: 2017-07-12 20:13 IST
ಬೆಂಗಳೂರು, ಜು.12: ಕಳೆದ ಜೂನ್‌ನಲ್ಲಿ ನಡೆದ ಎಸೆಸೆಲ್ಸಿ ಪೂರಕ ಪರೀಕ್ಷೆಯ ಫಲಿತಾಂಶವು ಜೂ.13ರಂದು ಮಧ್ಯಾಹ್ನ 3ಗಂಟೆಯ ನಂತರ http://sslc.kar.nic.in ಹಾಗೂ http://karresults.nic.in ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳಲಿದೆ.
ಫಲಿತಾಂಶದ ಕುರಿತು ಜು.13ರಂದು ಬೆಳಗ್ಗೆ 11ಕ್ಕೆ ನಗರದ ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಪ್ರತಿಕಾಗೋಷ್ಟಿಯಲ್ಲಿ ಮಾತನಾಡಲಿದ್ದಾರೆ. ಜು.14ರಂದು ಬೆಳಗ್ಗೆ 10ಗಂಟೆಗೆ ಎಲ್ಲ ಪ್ರೌಢಶಾಲೆಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಿ ಯಶೋದಾ ಬೋಪಣ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.