ಶರತ್ ಮನೆಗೆ ಸಚಿವ ರೈ ಭೇಟಿ

Update: 2017-07-12 15:31 GMT

ಬಂಟ್ವಾಳ, ಜು. 12: ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಮೃತಪಟ್ಟ ಶರತ್ ಮಡಿವಾಳರವರ ಸಜಿಪಮುನ್ನೂರು ಗ್ರಾಮದ ಕಂದೂರಿನಲ್ಲಿರುವ ಮನೆಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬುಧವಾರ ಬೆಳಗ್ಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶರತ್ ತಂದೆ ತನಿಯಪ್ಪ ಮಡಿವಾಳರವರನ್ನು ಮಾತನಾಡಿಸಿದ ಸಚಿವ ರೈ ಕೆಲ ಕ್ಷಣ ಭಾವುಕರಾದರು. ಸರಕಾರದಿಂದ ಸಿಗುವ ಸವಲತ್ತುಗಳನ್ನು ಒದಗಿಸುವ ಭರವಸೆ ನೀಡಿದ ಸಚಿವರು ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಪದ್ಮಶೇಖರ ಜೈನ್, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್ ಮತ್ತಿತರರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News