×
Ad

ಬಂಟ್ವಾಳದಲ್ಲಿ ’ಶಾಂತಿಗಾಗಿ ಪಾದಯಾತ್ರೆ’ : ಜು. 14ರಂದು ಪೂರ್ವಭಾವಿ ಸಭೆ

Update: 2017-07-12 21:10 IST

ಬಂಟ್ವಾಳ, ಜು. 12: ತಾಲೂಕಿನಲ್ಲಿ ಕೋಮು ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ಜಾತ್ಯತೀತ ಜನತಾದಳ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ’ಶಾಂತಿಗಾಗಿ ಪಾದಯಾತ್ರೆ’ ಹಮ್ಮಿಕೊಳ್ಳಲಾಗುವುದು.

ಕಾರ್ಯಕ್ರಮದ ಪೂರ್ವ ಭಾವಿ ಸಭೆ ಜು.14ರಂದು ಸಂಜೆ 4 ಗಂಟೆಗೆ ಬಿ.ಸಿ.ರೋಡ್ ರಿಕ್ಷಾ ಭವನದಲ್ಲಿ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಸಲಹೆ ಸೂಚನೆ ನೀಡಬೇಕಾಗಿ ಕೋರಲಾಗಿದೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರವರ ಆದೇಶದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ  ಬಿ.ಎಂ.ಫಾರೂಕ್, ಕಡೂರು ಶಾಸಕ ವೈ.ಎಸ್.ವಿ.ದತ್ತಾ, ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ ಸಹಿತ ರಾಜ್ಯ, ಜಿಲ್ಲಾ ಮಟ್ಟದ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆದ್ದರಿಂದ ಪಕ್ಷದ ಕಾರ್ಯಕರ್ತರು ಹಾಗೂ ಹಿತೈಷಿಗಳು ಭಾಗವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಹಾರೂನ್ ರಶೀದ್ ಹಾಗೂ ಕ್ಷೇತ್ರ ಅಧ್ಯಕ್ಷ ಬಿ.ಮೋಹನ್ ಜಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News